ಬೆಂಗಳೂರು,ಆಗಸ್ಟ್,19.2023(www.justkannada.in): ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ, ದಿನಾಂಕವನ್ನ ಬದಲಾವಣೆ ಮಾಡಲಾಗಿದೆ.
ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಆಗಸ್ಟ್ 27ರ ಬದಲು ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಆಗಸ್ಟ್ 30ಕ್ಕೆ ಬೆಂಗಳೂರಿಗೆ ರಾಹುಲ್ ಗಾಂಧಿ ಬರುತ್ತಿದ್ದಾರೆ. ಹೀಗಾಗಿ ಮೈಸೂರಿನಲ್ಲಿ ಕಾರ್ಯಕ್ರಮ ನಡೆಸಲು ನಿರ್ಧಾರ ಮಾಡಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
Key words: August 30- Grilakshmi Yojana – Mysore – Minister- Lakshmi Hebbalkar