.
ಬೆಂಗಳೂರು,ನ,8,2019(www.justkannada.in): ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪೊಲೀಸ್ ಅಧಿಕಾರಿಗಳ ಮನೆ ಸೇರಿ ರಾಜ್ಯದ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ.
ಐಜಿಪಿ ಹೇಮಂತ್ ನಿಂಬಾಳ್ಕರ್, ಎಸ್ ಪಿ ಅಜಯ್ ಹಿಲೋರಿ, ಡಿವೈಎಸ್ ಪಿ ಶ್ರೀಧರ್ ಸೇರಿ ಹಲವು ಅಧಿಕಾರಿಗಳ ಮನೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು, ಬೆಳಗಾವಿ, ರಾಮನಗರ ಸೇರಿ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ ಎನ್ನಲಾಗಿದೆ.
Key words: IMA –fraud- case- CBI- raids – 14 place