ಬೆಂಗಳೂರು,ಸೆಪ್ಟಂಬರ್,3,2021(www.justkannada.in): ಟೋಯಿಂಗ್ ಮಾಡುವಾಗ ಶುಲ್ಕ ಪಡೆದು ಸ್ಥಳದಲ್ಲೇ ಮಾಲೀಕರಿಗೆ ವಾಹನ ಬಿಟ್ಟುಕೊಡಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ.
ವಾಹನ ಟೋಯಿಂಗ್ ಮಾಡುವಾಗ ಸಿಬ್ಬಂದಿಗಳಿಂದ ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸರಿಗೆ ತಾಕೀತು ಮಾಡಿದ್ದಾರೆ. ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿಗಳನ್ನು ಪಾಲಿಸುವಂತೆ ಸೂಚನೆ ನೀಡಿದ್ದಾರೆ.
ಇನ್ನು ಮುಂದೆ ಯಾವುದೇ ಸಂಧರ್ಭದಲ್ಲಿ ಟ್ರಾಫಿಕ್ ಪೊಲೀಸರು ವಾಹನವನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನದ ಮಾಲೀಕರು ಸ್ಥಳದಲ್ಲಿದ್ದರೆ ಕೇವಲ ‘ನೋ ಪಾರ್ಕಿಂಗ್’ ಶುಲ್ಕದ ಹಣವನ್ನು ಮಾತ್ರ ಪಡೆದುಕೊಳ್ಳಬೇಕು. ವಾಹನವನ್ನು ಅಲ್ಲಿಯೇ ಅವರಿಗೆ ಬಿಟ್ಟು ಕೊಡಬೇಕು ಮತ್ತು ಟೋಯಿಂಗ್ ಮಾಡಬಾರದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂಥ್ ಹಾಗೂ ಹೆಚ್ಚುವರಿ ಆಯುಕ್ತ ಸಂಚಾರ ವಿಭಾಗದ ರವಿಕಾಂತೇಗೌಡ ಅವರ ಜೊತೆ ಸಭೆ ನಡೆಸಿದ್ದಾರೆ.
ಯಾವುದೇ ವಾಹನವನ್ನು ಟೋಯಿಂಗ್ ಮಾಡುವ ಪೂರ್ವದಲ್ಲಿ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ವಾಹನ ಮಾಲೀಕರ ಗಮನ ತರಬೇಕು. ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು. ವಾಹನ ಟೋಯಿಂಗ್ ಮಾಡಬೇಕಾದ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಎಲ್ಲಾ ನಿಯಾಮಾವಳಿಗಳನ್ನು ಚಾಚೂ ತಪ್ಪದೆ ಅನುಸರಿಸಬೇಕು ಎಂದು ಸಭೆಯಲ್ಲಿ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ.
ಟೋಯಿಂಗ್ ಸಿಬ್ಬಂದಿಗಳು ಸಾರ್ವಜನಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಟೋಯಿಂಗ್ ಮಾಡಲಾಗುವ ವಾಹನಗಳನ್ನು ಅತ್ಯಂತ ಜಾಗರೂಕತೆಯಿಂದ ಯಾವುದೇ ಹಾನಿಗೊಳಗಾಗದಂತೆಯೂ ನೋಡಿಕೊಳ್ಳಬೇಕು ಎಂದೂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
Key words: vehicle -owner – towing-Home Minister -Araga Jnanendra