ಮುಂಬೈ,ನವೆಂಬರ್,15,2023(www.justkannada.in): ಏಕದಿನ ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡು ಬ್ಯಾಟಿಂಗ್ ಶುರುಮಾಡಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು. ಬ್ಯಾಟಿಂಗ್ ಆರಂಭವಾಗಿದ್ದು ರೋಹಿತ್ ಮತ್ತು ಶುಬ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. ಪ್ರಸ್ತುತ ಸ್ಕೋರ್ 5 ಓವರ್ ಗೆ ವಿಕೆಟ್ ನಷ್ಟವಿಲ್ಲದೆ 47 ರನ್ ಗಳಿಸಿದೆ. ಪಂದ್ಯದಲ್ಲಿ ಗೆಲುವು ಸಾಧಿಸಿದವರು ಫೈನಲ್ ಪ್ರವೇಶಿಸಲಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ ಉಭಯ ತಂಡಗಳು 117 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ 59 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 50 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯ ಟೈನಲ್ಲಿ ಅಂತ್ಯಕಂಡರೆ, 7 ಮ್ಯಾಚ್ಗಳು ಫಲಿತಾಂಶರಹಿತವಾಗಿತ್ತು.
ತಂಡಗಳು ಹೀಗಿದೆ
ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ನ್ಯೂಜಿಲೆಂಡ್ ತಂಡ:
ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲಾಥಮ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
Key words: ODI World Cup -Semi-Final-Team India -won – toss -elected to bat.