ಬೆಂಗಳೂರು,ಡಿಸೆಂಬರ್,3,2021(www.justkannada.in): ರಾಜ್ಯದಲ್ಲಿ ಎರಡು ಒಮಿಕ್ರಾನ್ ವೈರಸ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆ ಸೋಂಕು ಹರಡದಂತೆ ತಡೆಗಟ್ಟಲು ತಜ್ಞರ ಜತೆ ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಿನ್ನೆ ಸಂಜೆ ಒಮಿಕ್ರಾನ್ ಬಗ್ಗೆ ಮಾಹಿತಿ ಸಿಕ್ಕಿದೆ.ಇಬ್ಬರಿಗೆ ಒಮಿಕ್ರಾನ್ ಪತ್ತೆಯಾಗಿದೆ. ಒಮಿಕ್ರಾನ್ ಸೋಂಕಿತ ಸಂಪರ್ಕಿತರ ಪತ್ತೆಗೆ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಹೇಗೆ ನಿಭಾಯಿಸಬೇಕು ಎಂದು ಚರ್ಚಿಸಲಾಗುತ್ತದೆ. ಸಂಪೂರ್ಣ ಮಾಹಿತಿ ಸಂಗ್ರಹಕ್ಕೆ ಸೂಚನೆ ನೀಡಿದ್ದೇವೆ ಎಂದರು.
ಇಂದು ಸಭೆ ನಡೆಸುತ್ತೇವೆ. ಬೇರೆ ದೇಶಗಳಲ್ಲಿ ಪ್ರೋಟೊಕಾಲ್ ಹೇಗಿದೆ ಎಂಬ ಬಗ್ಗೆ ಚರ್ಚಿಸುತ್ತೇವೆ ಎಲ್ಲದರ ಬಗ್ಗೆ ಅಧ್ಯಯನ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ಥೇವೆ. ತಜ್ಞರ ಜತೆ ಚರ್ಚಿಸಿ ಕಠಿಣ ಕ್ರಮದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
Key words: Omicron -detection – Discuss – experts – decide – tough action-CM Basavaraja Bommai.