ಬೆಂಗಳೂರು,ಸೆಪ್ಟಂಬರ್,29,2023(www.justkannada.in): ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಇಂದು ಇಡೀ ಕರ್ನಾಟಕ ಬಂದ್ ಮಾಡಲಾಗಿದ್ದು ಈ ನಡುವೆ ನಿಯಮ ಉಲ್ಲಂಘಿಸಿದರೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ನಾವು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬಂದ್ ಮಾಡದಂತೆ ಸಂಘಟನೆಗಳಿಗೆ ಮನವಿ ಮಾಡಿದ್ದೇವೆ. ಕಾನೂನಿನ ಪ್ರಕಾರ ಬಂದ್ ಮಾಡಬಾರದು. ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದೇನೆ ಎಂದರು.
ನಿಯಮ ಉಲ್ಲಂಘಿಸಿದರೇ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸಹಕರಿಸುತ್ತಾರೆ ಎಂಬ ವಿಶ್ವಾಸವಿದೆ. ಸುಖ ಸುಮ್ಮನೆ ಬಂಧಿಸುವುದಿಲ್ಲ. ಕಾನೂನು ವಿರುದ್ಧ ನಡೆದುಕೊಂಡರೆ ಬೇರೆ ವಿಧಿಯಿಲ್ಲ ಎಂದು ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
Key words: Karnataka bandh – Cauvery dispute- Home Minister -G. Parameshwar