ಬೆಂಗಳೂರು,ನವೆಂಬರ್,6,2021(www.justkannada.in): ಸರ್ವೋಚ್ಛ ನ್ಯಾಯಾಲಯವು ಕೃಷ್ಣಾ ಜಲ ವಿವಾದ ಪ್ರಕರಣವನ್ನು 8ನೇ ನವೆಂಬರ್ 2021ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಇಂದು ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದರು.
ವಿಧಾನಸೌಧದ ತಮ್ಮ ಕಛೇರಿಯಲ್ಲಿ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಗೋವಿಂದ ಕಾರಜೋಳ ಸಭೆ ನಡೆಸಿದರು. ಈ ಕುರಿತು ಸಚಿವರು ನ್ಯಾಯಾಲಯದ ಪ್ರಕರಣದ ಹಿನ್ನೆಲೆಯಲ್ಲಿ ಕರ್ನಾಟಕದ ನಿಲುವುಗಳ ಬಗ್ಗೆ ಹಾಗೂ ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿವರಗಳನ್ನು ಪಡೆದು ಮಹತ್ವದ ಸೂಚನೆಗಳನ್ನು ನೀಡಿದರು.
ಈ ಸಭೆಯಲ್ಲಿ ನೀರಾವರಿ ಇಲಾಖೆಯ ಕಾರ್ಯದರ್ಶಿ ಕೃಷ್ಣಮೂರ್ತಿ ಬಿ. ಕುಲಕರ್ಣಿ, ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಕುಮಾರ್, ಅಂತರರಾಜ್ಯ ಜಲ ವಿವಾದ ಸಲಹೆಗಾರರಾದ ಬಂಗಾರ ಸ್ವಾಮಿ ಅವರು ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಹಾಗೂ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಹಿರಿಯ ವಕೀಲರಾದ ಮೋಹನ್ ಕಾತರಕಿಯವರೊಂದಿಗೆ ಸಚಿವ ಗೋವಿಂದ ಕಾರಜೋಳ ದೂರವಾಣಿ ಮೂಲಕ ಚರ್ಚಿಸಿದರು.
Key words: Krishna water dispute- case- Minister 0Govinda Karajola-meeting