ಬೆಂಗಳೂರು,ಡಿಸೆಂಬರ್,8,2021(www.justkannada.in): ಕೋವಿಡ್ 3ನೇ ಅಲೆ ಭೀತಿ ಹಿನ್ನೆಲೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳ ಜತೆ ಸಭೆ ನಡೆಸಿ ಮಾಹಿತಿ ಪಡೆದರು.
ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೊರೋನಾ ಸಂಬಂಧ ಸಭೆಯಲ್ಲಿ ಮಾತುಕತೆ ನಡೆಸಿದ್ದೇವೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಬಗ್ಗೆ ವಿವರ ಪಡೆದಿದ್ದೇನೆ ದೇಶ ವಿದೇಶದಲ್ಲಿ ಒಮಿಕ್ರಾನ್ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಮಾಹಿತಿ ಪಡೆದಿದ್ದೇನೆ. ಎಲ್ಲಾ ವಿಚಾರಗಳ ಬಗ್ಗೆ ನಾಳೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಸಭೆಯಲ್ಲಿ ಬೆಡ್ ,ಆಕ್ಸಿಜನ್, ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಕಳೆದ ಬಾರಿ ಎಷ್ಟು ಹಣ ನೀಡಿದ್ದೇವೆ. ಬಾಕಿ ಹಣ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದರು.
Key words: covid- next decision- after -tomorrow’s –Cabinet meeting-CM -Basavaraja Bommai