ಬೆಂಗಳೂರು,ಏಪ್ರಿಲ್,26,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದು, ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಈವರೆಗೆ 265 ಕೋಟಿ ರೂ. ಜಪ್ತಿ ಮಾಡಲಾಗಿದೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್ ತಿಳಿಸಿದರು.
ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್, ನೀತಿಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಈವರೆಗೆ 265 ಕೋಟಿ ರೂ. ಜಪ್ತಿ ಮಾಡಲಾಗಿದೆ. ಗುಂಪು ಘರ್ಷಣೆ ಸಂಬಂಧ 15 ಎಫ್ ಐಆರ್ ದಾಖಲಾಗಿದೆ. ದ್ವೇಷ ರಾಜಕಾರಣ ಸಂಬಂಧ 5 ಎಫ್ ಐಆರ್ ಸೇರಿ 673 ಎಫ್ ಐ ಆರ್ ದಾಖಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯದ 224 ಕ್ಷೇತ್ರಗಳಲ್ಲಿ ಒಟ್ಟು 2615 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 2429 ಪುರುಷ ಅಭ್ಯರ್ಥಿಗಳು 185 ಮಹಿಳಾ ಅಭ್ಯರ್ಥಿಗಳು ಇತರೇ 1 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಜ್ಯದಲ್ಲಿ ಒಟ್ಟು 5,30,85,566 ಮತದಾರರಿದ್ದು, ಈ ಪೈಕಿ 2,66,82,156 ಪುರುಷ ಮತದಾರರು, 2,63,98,483 ಮಹಿಳಾ ಮತದಾರರಿದ್ದಾರೆ. ರಾಜ್ಯಾದ್ಯಂತ ಒಟ್ಟು 58,545 ಮತ ಕೇಂದ್ರಗಳನ್ನ ಸ್ಥಾಪಿಸಲಾಗುವುದು ಎಂದು ಮನೋಜ್ ಕುಮಾರ್ ತಿಳಿಸಿದರು.
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ 80 ಸಾವಿರಕ್ಕೂ ಹೆಚ್ಚು ಮಂದಿ ವೋಟ್ ಫ್ರಂ ಹೋಮ್ ಅವಕಾಶ ಪಡೆಯಲಿದ್ದಾರೆ ಎಂದು ಮನೋಜ್ ಕುಮಾರ್ ಹೇಳಿದರು.
Key words: Violation – Election -Code of Conduct- Rs 265 crore – Seize-l 673 FIR