ನವದೆಹಲಿ,ಡಿಸೆಂಬರ್,5,2021(www.justkannada.in): ದೇಶದಲ್ಲಿ ಒಮಿಕ್ರಾನ್ ಸೋಂಕಿನ ಪ್ರಕರಣಗಳು ದಿನೇದಿನೆ ಏರಿಕೆಯಾಗುತ್ತಿದ್ದು, ಇದೀಗ 5ನೇ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.
ನವದೆಹಲಿಯಲ್ಲಿ 5ನೇ ಒಮಿಕ್ರಾನ್ ಕೇಸ್ ಪತ್ತೆಯಾಗಿದೆ. ದೆಹಲಿಯಲ್ಲಿ ಮೊದಲನೇ ಒಮಿಕ್ರಾನ್ ಪ್ರಕರಣ ಕಾಣಿಸಿಕೊಂಡಿದೆ. ಸೋಂಕಿತನನ್ನು ಎಲ್ಎನ್ಜೆಪಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋಂಕಿತ ವ್ಯಕ್ತಿ ತಾಂಜಾನಿಯದಿಂದ ಬಂದಿದ್ದರು. ಹಾಗೇ, ಇನ್ನೂ 17 ಮಂದಿಯಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಒಮಿಕ್ರಾನ್ ಸೋಂಕು ಭಾರತದಲ್ಲಿ ಮೊದಲು ಕರ್ನಾಟಕದ ಬೆಂಗಳೂರಿನಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಪತ್ತೆಯಾಗಿತ್ತು. ಇಲ್ಲಿ ಇಬ್ಬರಲ್ಲಿ ವೈರಸ್ ದೃಢಪಟ್ಟ ಮರುದಿನ ಗುಜರಾತ್ 75ವರ್ಷದ ವೃದ್ಧರೊಬ್ಬರಲ್ಲಿ ಒಮಿಕ್ರಾನ್ ಪತ್ತೆಯಾಗಿತ್ತು.
ಹಾಗೇ, ನಿನ್ನೆ ಮಹಾರಾಷ್ಟ್ರದ ದೊಂಬಿವ್ಲಿಯ 33ವರ್ಷದ ವ್ಯಕ್ತಿಯೊಬ್ಬರಲ್ಲಿ ಒಮಿಕ್ರಾನ್ ದೃಢಪಟ್ಟಿತ್ತು. ಅವರ ಜತೆಗೆ ಬಂದವರನ್ನೆಲ್ಲ ಟ್ರೇಸ್ ಮಾಡಿ ತಪಾಸಣೆಗೆ ಒಳಪಡಿಸಲಾಗಿದೆ.
Key words: 5th Omicron- infection- case -detected – country.