ಮೈಸೂರು,ಡಿಸೆಂಬರ್,28,2021(www.justkannada.in): ನಕಲಿ ನಂದಿನಿ ತುಪ್ಪ ಪತ್ತೆ ಪ್ರಕರಣ ಪ ಸಂಬಂಧ ಡಿವೈಎಸ್ಪಿ ಸುಮಿತ್ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿತ್ತು.ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಚೇತನ್ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೈಸೂರು ಎಸ್ಪಿ ಆರ್.ಚೇತನ್, ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ ಪೈಕಿ ಇಬ್ಬರ ಹೆಸರು ಎಫ್ಐಆರ್ ನಲ್ಲಿ ಉಲ್ಲೇಖ ಆಗಿತ್ತು. ತನಿಖೆ ಮುಂದುವರೆದಿದ್ದು, ಆರೋಪಿಗಳು ನೀಡುವ ಸುಳಿವಿನ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪ್ರಕರಣ ಸಂಬಂಧ ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ. ಆರೋಪಿಗಳು ಬಹಳ ವರ್ಷಗಳಿಂದ ಮೈಸೂರಿನಲ್ಲೇ ನೆಲೆಸಿದ್ದರೆಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದುವರೆಗಿನ ತನಿಖೆ ಪ್ರಕಾರ ಕೆಎಂಎಫ್ ನ ಸಿಬ್ಬಂದಿಗಳು ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ, ಹಾಗಂತ ಈಗಲೇ ನಿರ್ಧಾರ ಕೈಗೊಳ್ಳಲಾಗುವುದಿಲ್ಲ. ದಾಳಿ ವೇಳೆ 10 ಟನ್ ನಕಲಿ ನಂದಿನಿ ತುಪ್ಪ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದರು.
ನೈಟ್ ಕರ್ಫ್ಯೂ ಕಟ್ಟುನಿಟ್ಟಿನ ಜಾರಿಗಾಗಿ ಜಿಲ್ಲೆಯಾದ್ಯಂತ 13 ಚೆಕ್ ಪೋಸ್ಟ್
ಇಂದು ರಾತ್ರಿ10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗುತ್ತಿದೆ. ನೈಟ್ ಕರ್ಫ್ಯೂ ಕಟ್ಟುನಿಟ್ಟಿನ ಜಾರಿಗಾಗಿ ಜಿಲ್ಲೆಯಾದ್ಯಂತ 13 ಚೆಕ್ ಪೋಸ್ಟ್ ತೆರೆಯಲಾಗಿದೆ. ಹೋಟೆಲ್ ರೆಸ್ಟೋರೆಂಟ್ ಗಳಲ್ಲಿ 50% ಆಸನಗಳ ಭರ್ತಿಗೆ ಅವಕಾಶವಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಜಾರಿಗೊಳಿಸಿರುವ ನೈಟ್ ಕರ್ಫ್ಯೂಗೆ ಜನರು ಸಹಕಾರ ನೀಡಬೇಕು. ನೈಟ್ ಕರ್ಫ್ಯೂ ಕಟ್ಟುನಿಟ್ಟಿನ ಜಾರಿಗೆ ಪೊಲೀಸ್ ಇಲಾಖೆ ಸನ್ನದ್ದವಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಚೇತನ್ ಹೇಳಿದರು.
Key words: Mysore –SP-R. Chetan – fake Nandini ghee -detection -case -strict –night- curfew.