ಬೆಂಗಳೂರು,ನವೆಂಬರ್,12,2021(www.justkannada.in): ನಿನ್ನೆಯಷ್ಟೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಬಿಟ್ ಕಾಯಿನ್ ಪ್ರಕರಣ ಪ್ರಸ್ತಾಪಿಸಿದ್ದರು. ಈ ವೇಳೆ ಈ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಉತ್ತಮ ಕೆಲಸ ಮುಂದುವರೆಸಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದರು.
ಈ ಕುರಿತು ಟ್ವಿಟ್ಟರ್ ನಲ್ಲಿ ಟೀಕಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ,ಬಿಟ್ ಕಾಯಿನ್ ವಿಚಾರವಾಗಿ ಆರೋಪದ ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.
ಬಿಟ್ ಕಾಯಿನ್ ನಂತಹ ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ? ಬಿಟ್ ಕಾಯಿನ್ ಹಗರಣದ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತನಿಖಾ ಸಂಸ್ಥೆಗಳಿಂದಲೇ ತನಿಖೆ ನಡೆಯುತ್ತಿದೆ. ಬೊಮ್ಮಾಯಿ ಈಗಿನ ಮುಖ್ಯಮಂತ್ರಿಗಳು. ಈ ಹಂತದಲ್ಲಿ ಪ್ರಧಾನಿ ಮೋದಿ ಆರೋಪವನ್ನು ನಿರ್ಲಕ್ಷಿಸಿ ಎಂದರೆ ತನಿಖೆ ಕೈಬಿಡಿ ಎಂದಾಗುವುದಿಲ್ಲವೇ? ಬಿಟ್ ಕಾಯಿನ್ ಹಗರಣದಲ್ಲಿ ಬೊಮ್ಮಾಯಿ ಭಾಗಿಯೋ ಇಲ್ಲವೋ ಗೊತ್ತಿಲ್ಲ ಅವರು ಅಪರಾಧಿಗಳೆಂದು ಯಾರೂ ಹೇಳಿಲ್ಲ. ನಿಸ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ಎಂದಷ್ಟೇ ನಾವು ಹೇಳುತ್ತಿರುವುದು ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.ter- unilateral –decision- final- Former CM -Siddaramaiah