ಮೈಸೂರು,ನವಂಬರ್,9,2021(www.justkannada.in): ಮಾಜಿ ಸಿಎಂ ಸಿದ್ಧರಾಮಯ್ಯ ರನ್ನು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹಾಡಿ ಹೊಗಳಿದ್ದಾರೆ.
ಕೇರ್ಗಳ್ಳಿ ಹೊಂಬಾಳಮ್ಮ ಸಿದ್ದರಾಮೇಶ್ವರ ಸಮುದಾಯ ಭವನವನ್ನ ಮಾಜಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಿ.ಟಿ ದೇವೇಗೌಡ, ಹಾನಗಲ್ ನಲ್ಲಿ ಕಾಂಗ್ರೆಸ್ ಒಗ್ಗಟ್ಟಾಗಿ ಹೋರಾಡಿ ಈ ರಾಜ್ಯಕ್ಕೆ ಒಂದು ಸಂದೇಶ ಕೊಟ್ಟಿದ್ದಾರೆ. 1983 ರಿಂದ ನಿರಂತರವಾಗಿ ನಾನು – ಸಿದ್ದರಾಮಯ್ಯ ಜೊತೆಯಾಗಿ ಬೆಳೆದಿದ್ದೇವೆ. ಜೆಡಿಎಸ್ ಅನ್ನು ನೆಲದಿಂದ ಜೊತೆಯಾಗಿ ಕಟ್ಟಿದ್ದೇವೆ. ನಂತರದ ಘಟನಾವಳಿಗಳಿಂದ ಸಿದ್ದರಾಮಯ್ಯ ಜೆಡಿಎಸ್ ತೊರೆದರು.. ಕಾಂಗ್ರೆಸ್ ಗೆ ಹೋಗಿ ಸಿದ್ದರಾಮಯ್ಯ ಸಿಎಂ ಆದರು. ಸಿದ್ದರಾಮಯ್ಯ ಅವರು ಕೊಟ್ಟ ಅನ್ನಭಾಗ್ಯ ಬಹಳ ಮುಖ್ಯವಾದ ಯೋಜನೆ. ಸಿದ್ದರಾಮಯ್ಯ ಅವರಿಗೆ ಹಸಿವಿನ ಕಷ್ಟ ಗೊತ್ತಿದೆ. ಸಿದ್ದರಾಮಯ್ಯ ಎಲ್ಲಾ ಜವಾಬ್ದಾರಿ ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಸಿದ್ದರಾಮಯ್ಯ ಮಾತು ಒರಟು ಅಷ್ಟೇ. ಡಾ.ಎಚ್.ಸಿ. ಮಹದೇವಪ್ಪ ಎಂಬ ದಲಿತ ನಾಯಕನನ್ನು ದೊಡ್ಡದಾಗಿ ಬೆಳೆಸಿದ್ದು ಸಿದ್ದರಾಮಯ್ಯ. ಸಿದ್ದರಾಮಯ್ಯ ನನ್ನು ವೀರಶೈವ ವಿರೋಧಿ ಎಂಬ ಪಟ್ಟ ಕಟ್ಟಿದ್ದರು. ಹಲವು ವೀರಶೈವ ಮುಖಂಡರನ್ನು ಮೈಸೂರು ಭಾಗದಲ್ಲಿ ಬೆಳೆಸಿದ್ದು ಸಿದ್ದರಾಮಯ್ಯ ಎಂದು ಗುಣಗಾನ ಮಾಡಿದರು.
ದಲಿತರು, ಒಕ್ಕಲಿಗರು, ನಾಯಕರು, ವೀರಶೈವರು ಎಲ್ಲಾ ಸಮುದಾಯವನ್ನು ಸಿದ್ದರಾಮಯ್ಯ ಪ್ರೀತಿಸುತ್ತಾರೆ. ಸಿದ್ದರಾಮಯ್ಯ – ಜಿ.ಟಿ. ದೇವೇಗೌಡ ಯಾಕೆ ಬೇರೆಯಾದರು ಎಂಬ ಕೊರಗು ಜಿಲ್ಲೆಯ ಜನರಿಗೆ ಇತ್ತು. ನಾನು ಯಾವತ್ತೂ ಸಿದ್ದರಾಮಯ್ಯ ಅವರ ವಿರುದ್ದ ಹಿಂದೆ – ಮುಂದೆ ಯಾವುದೇ ಮಾತಾಡಿಲ್ಲ. ಸಿದ್ದರಾಮಯ್ಯ ಸೋಲಲಿ ಗೆಲ್ಲಲಿ ಚಾಮುಂಡೇಶ್ವರಿ ಕ್ಷೇತ್ರದ ಜನರು ಅವರನ್ನ ಪ್ರೀತಿಸುತ್ತಾರೆ. ಇಂತ ನಾಯಕನನ್ನು ಕೊಟ್ಟ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಅಭಿನಂದನೆ ಎಂದರು.
ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ಕ್ಷೇತ್ರಕ್ಕೆ ಬರೋದಕ್ಕೆ ತುಂಬಾ ಬೇಸರ ಆಗಿತ್ತು. ಹಲವು ದಿನಗಳ ಬಳಿಕ ನಾನು ಚಾಮುಂಡೇಶ್ವರಿ ಕ್ಷೇತ್ರದಕ್ಕೆ ಬಂದಿದ್ದೇನೆ. ಚುನಾವಣೆಯಲ್ಲಿ ನಾನು ಜಿಟಿ.ದೇವೇಗೌಡ ಪರಸ್ಪರ ಎದುರಾಗಿದ್ವಿ. ಚುನಾವಣೆಯಲ್ಲಿ ನನ್ನನ್ನೇ ಸೋಲಿಸಿದ್ದ ಗಿರಾಕಿ. ಸೋತ ಬಳಿಕ ಇಬ್ಬರೂ ಒಂದೇ ವೇದಿಕೆಯಲ್ಲಿ ಕುಳಿತುಕೊಳ್ಳುವ ಬಗ್ಗೆ ಸಾಕಷ್ಟು ಕುತೂಹಲ ಇತ್ತು. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತವನು, ಜಿ.ಟಿ.ಗೆದ್ದಿದ್ದಾರೆ.ಜನ್ರು ಕರೆದ ಮೇಲೆ ಒಂದೇ ವೇದಿಕೆಗೆ ಬರಲೇ ಬೇಕು. ಜಿ.ಟಿ. ದೇವೇಗೌಡ ಕಾಂಗ್ರೆಸ್ ಗೆ ಬಂದಿದ್ದಾನೆ ಅಂತಾ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಜಿ.ಟಿ. ದೇವೇಗೌಡ ಗೆ ಕಾಂಗ್ರೆಸ್ ಬರೋದಿಕ್ಕೆ ಮನಸ್ಸು ಇದೆ. ಆದರೆ ಇನ್ನೂ ಜಿಟಿ.ದೇವೇಗೌಡ ಕಾಂಗ್ರೆಸ್ ಗೆ ಸೇರಿಲ್ಲ. ಆದ್ರೆ ಹೆಚ್.ಡಿ. ದೇವೇಗೌಡ, ಕುಮಾರಸ್ವಾಮಿ ಅಲ್ಲಿಯೇ ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಜಿಟಿ.ದೇವೇಗೌಡ ನನಗೆ ರಾಜಕೀಯ ಎದುರಾಳಿ ಹೊರತು, ವೈಯಕ್ತಿಕ ದ್ವೇಷಿ ಅಲ್ಲ. ಕಾಂಗ್ರೆಸ್ ಪಕ್ಷ ಸಾಕಷ್ಟು ವರ್ಷಗಳ ಇತಿಹಾಸ ಇದೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಒಪ್ಪಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬರೋದಿದ್ರೆ ಬರಬಹುದು. ಯಾರೇ ಬಂದರು ಪಕ್ಷಕ್ಕೆ ಸ್ವಾಗತ ಎಂದರು.
Key words: former CM-Siddaramaiah praises- MLA – Deve Gowda.