ಬೆಳಗಾವಿ,ಡಿಸೆಂಬರ್,24,2021(www.justkannada.in): ಮಾತು ಕೊಟ್ಟಂತೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಳಗಾವಿಯ ಚಳಿಗಾಲದ ಅಧಿವೇಶನ ಅಂತ್ಯವಾದ ಬಳಿಕ ಸುವರ್ಣಸೌಧದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕೆಂಬ ಆಸೆ ಜನರಿಗಿತ್ತು. ಮಾತು ಕೊಟ್ಟಂತೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದ್ದೇವೆ. ಅಧಿವೇಶನದಲ್ಲಿ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಿದ್ದೇವೆ. ರೈತರು ಸಂಕಷ್ಟದಲ್ಲಿದ್ದವರ ಬಗ್ಗೆ ಚರ್ಚೆಯಾಗಿದೆ. ಕಂದಾಯ ಸಚಿವರು ಸಮರ್ಪಕ ಉತ್ತರ ನೀಡಿದ್ದಾರೆ. ರೈತರಿಗೆ ಶೀಘ್ರದಲ್ಲೇ ಪರಿಹಾರ ನೀಡುತ್ತೇವೆ. 14 ಲಕ್ಷ ರೈತರಿಗೆ ನೆರವು ನೀಡಿದ್ದು ದಾಖಲೆ. ಸಕಾಲದಲ್ಲಿ ರೈತರಿಗೆ ನೆರವಾಗಿದೆ ಅಂದ್ರೆ ಅದು ಬಿಜೆಪಿ ಸರ್ಕಾರ ಎಂದು ನುಡಿದರು.
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಉತ್ತರ ಸಿಕ್ಕಿದೆ.ಉತ್ತರ ಕರ್ನಾಟಕದ ಭಾಗಕ್ಕೆ ಏನು ಮಾಡಬೇಕೂ ಅದನ್ನ ಸರ್ಕಾರ ಮಾಡುತ್ತೆ. ಹಲವಾರು ಯೋಜನೆಗೆಳಿಗೆ ಅನುಮೋದನೆ ನೀಡಿದ್ದೇವೆ.ಬಹುತೇಕವಾಗಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಇರುತ್ತೆ. ಈಗಿರುವ ಮಾರ್ಗಸೂಚಿಯೇ ಮುಂದುವರೆಯುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
Key words: session – Belgaum –discussion-farmers –problem- CM Basavaraja Bommai.