ಮೈಸೂರು,ಡಿಸೆಂಬರ್,20,2021(www.justkannada.in): ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದು ಅಸ್ವಸ್ಥನಾಗಿದ್ದ ಪೌರ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಮ್ಯಾನ್ ಹೋಲ್ ನಲ್ಲಿ ಉಸಿರುಗಟ್ಟಿ ಅಸ್ವಸ್ಥರಾಗಿದ್ದ ಪೌರಕಾರ್ಮಿಕರ ಮಧು(27) ಸಾವನ್ನಪ್ಪಿದ್ದಾನೆ. ಪಿರಿಯಾಪಟ್ಟಣದ ವಾರ್ಡ್ ನಂ.10ರಲ್ಲಿ ಮ್ಯಾನ್ ಹೋಲ್ ಸ್ವಚ್ಚತೆಗೆ ಇಳಿದಿದ್ದ ಪೌರಕಾರ್ಮಿಕ ಮಧು ಅಸ್ವಸ್ಥನಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದನು. ಆದರೆ ಪೌರಕಾರ್ಮಿಕ ಮಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಜಿಲ್ಲಾಧಿಕಾರಿ ಕಚೇರಿ ಮುಂದೆ ಶವ ತಂದು ಪ್ರತಿಭಟನೆ ನಡೆಸಿದರು.
ಬಲವಂತವಾಗಿ ಪೌರಕಾರ್ಮಿಕರನ್ನ ಮ್ಯಾನ್ ಹೋಲ್ ಗೆ ಇಳಿಸಲಾಗಿದೆ ಎಂದು ಆರೋಪಿಸಿ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪೌರಕಾರ್ಮಿಕನ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ ಪ್ರತಿಭಟನಾಕಾರರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರ ಸಾವನ್ನಪ್ಪಿದ್ದು, ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವಂತೆ ಒತ್ತಾಯಿಸಿದರು.
ಜಿಲ್ಲಾಧಿಕಾರಿ ಕಚೇರಿ ಬಳಿ ಶವ ತಂದು ಪೌರಕಾರ್ಮಿಕರ ಪ್ರತಿಭಟನೆ ಹಿನ್ನೆಲೆ, ಸ್ಥಳಕ್ಕೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಭೇಟಿ ನೀಡಿ ಪೌರಕಾರ್ಮಿಕರ ಅಹವಾಲು ಸ್ವೀಕರಿಸಿದರು. ಬಳಿಕ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.
ಶೀಘ್ರವಾಗಿ ಕಾನೂನು ಪ್ರಕ್ರಿಯೆ ಮುಗಿಸಲು ಎಸ್ಪಿ ಜೊತೆಗೂ ಮಾತನಾಡಿದ್ದೀನಿ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಕರೆಸಿ ಈ ಬಗ್ಗೆ ಚರ್ಚೆ ಮಾಡಿದ್ದೀನಿ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹೇಳಿದರು.
Key words: Death – civilian worker – manhole-protest-mysore