ಬೆಂಗಳೂರು,ಜನವರಿ,4,2022(www.justkannada.in): ರಾಜ್ಯದಲ್ಲಿ ಕೋವಿಡ್ 3ನೇ ಅಲೆ ಭೀತಿ ಎದುರಾಗಿದ್ದು, ಇಂದು ಹೊಸದಾಗಿ 2,479 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಅದೇ ರೀತಿ ಇಂದು ಕೊರೊನಾ ಸೋಂಕಿಗೆ ನಾಲ್ವರು ಬಲಿ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡಾ 2.59ರಷ್ಟಿದೆ. ಎಂದು ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರದಲ್ಲೇ ಹೊಸದಾಗಿ 2,053 ಕೊರೊನಾ ಪ್ರಕರಣಗಳು ಪತ್ತೆ ಆಗಿದೆ. ಆ ಮೂಲಕ, ಬೆಂಗಳೂರಿನಲ್ಲಿ ಕೊರೊನಾ ಕೇಸ್ಗಳ ಸಂಖ್ಯೆ 2 ಸಾವಿರ ಗಡಿ ದಾಟಿದಂತಾಗಿದೆ. ಬೆಂಗಳೂರಿನಲ್ಲಿ 24 ಗಂಟೆಯಲ್ಲಿ ಕೊರೊನಾ ಕೇಸ್ ದ್ವಿಗುಣವಾಗಿದೆ. ನಿನ್ನೆ 1 ಸಾವಿರದಷ್ಟಿದ್ದ ಕೊರೊನಾ ಕೇಸ್ ಇಂದು 2 ಸಾವಿರ ತಲುಪಿದೆ.
Key words: total – 2479 new cases – covid – detected – state- today.