ಬೆಂಗಳೂರು,ಡಿಸೆಂಬರ್,9,2021(www.justkannada.in): ಕೊರೋನಾ 3ನೇ ಅಲೆ, ಒಮಿಕ್ರಾನ್ ಭೀತಿ ಹಿನ್ನೆಲೆ ರಾಜ್ಯ ಹಾಸ್ಟೆಲ್ ಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಹಾಸ್ಟೆಲ್ ನಲ್ಲಿ ಮಕ್ಕಳು ಒಟ್ಟಿಗೆ ಊಟಕ್ಕೆ ಹೋಗುವಂತಿಲ್ಲ. ಅಂತರ ಪಾಲಿಸಿಕೊಂಡು ಹೋಗುವ ವ್ಯವಸ್ಥೆಗಳನ್ನು ಹಾಸ್ಟೆಲ್ ಸಿಬ್ಬಂದಿಗಳು ಕೈಗೊಳ್ಳಬೇಕು. ಹಾಸ್ಟೆಲ್ ಸಿಬ್ಬಂದಿಗಳು 2 ಡೋಸ್ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಇನ್ನೂಂದು ವಾರದ ಬೆಳವಣಿಗೆ ಅವಲೋಕಿಸಿ ನಿರ್ಧಾರ ಮಾಡಲಾಗುವುದು. ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದೆ. ಮೂವರಿಗೆ ಕೋವಿಡ್ ಪಾಸಿಟಿವ್ ಬಂದರೆ ಕ್ಲಸ್ಟರ್ ಮಾಡುತ್ತೇವೆ. ಸಧ್ಯಕ್ಕೆ ಯಾವುದೇ ಹೊಸ ನಿರ್ಬಂಧಗಳು ಇಲ್ಲ ಎಂದು ಹೇಳಿದರು.
ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಹೊಸ ಮಾರ್ಗಸೂಚಿ ಬಗ್ಗೆ ಒಂದ ವಾರದ ಬಳಿಕ ನಿರ್ಧರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
Key words: New Guidelines – State- Hostels-CM Basavaraj Bommai