ಹುಬ್ಬಳ್ಳಿ,ಡಿಸೆಂಬರ್,5,2021(www.justkannada.in): ಸಿಎಂ ಬದಲಾವಣೆ ಕುರಿತು ಸಚಿವ ಕೆ.ಎಸ್ ಈಶ್ವರಪ್ಪ ಅವರ ಹೇಳಿಕೆಯನ್ನ ತಳ್ಳಿ ಹಾಕಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೀಘ್ರದಲ್ಲೇ ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಈಶ್ವರಪ್ಪನವರು ಹೇಳಿಲ್ಲ. ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. 2023ರವರೆಗೂ ಬಸವರಾಜ ಬೊಮ್ಮಾಯಿಯವರೇ ಸಿಎಂ ಆಗಿರುತ್ತಾರೆ ಎಂದು ಸ್ಪಷ್ಟನೆ ನೀಡಿದರು.
ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕುರಿತು ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಗುತ್ತಿಗೆದಾರರ ಆರೋಪಕ್ಕೆ ಸಾಕ್ಷಿ ಇಲ್ಲ. ಸಾಕ್ಷಿ ಇದ್ದರೇ ಎಸಿಬಿ ಲೋಕಾಯುಕ್ತಕ್ಕೆ ನೀಡಲಿ. ಮೋದಿ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ. ಪ್ರಧಾನಿ ಮೋದಿ ಭ್ರಷ್ಟಾಚಾರ ಸಹಿಸಲ್ಲ ಎಂದರು.
Key words: no question – CM- change-Union Minister- Prahlad Joshi -clarified