ಬೆಳಗಾವಿ,ಏಪ್ರಿಲ್,6,2023(www.justkannada.in): ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದ 1.5 ಕೋಟಿ ರೂ. ಹಣವನ್ನ ವಶಕ್ಕೆ ಪಡೆಯಲಾಗಿದೆ.
ಮುಂಬೈನಿಂದ ಬೆಂಗಳೂರಿಗೆ ತೆರಳಿದ್ದ ಖಾಸಗಿ ಬಸ್ ಅನ್ನು ತಪಾಸಣೆ ಮಾಡಿದ ವೇಳೆ ಪ್ರಯಾಣಿಕನ ಬಳಿ ಇದ್ದ ದಾಖಲೆ ಇಲ್ಲದ 1.5 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ಐಟಿ ಅಧಿಕಾರಿಗಳಿಗೆ ಕೇಸ್ ಹಸ್ತಾಂತರಿಸಿದ್ದಾರೆ.
ಈ ನಡುವೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಜೆ.ಕೆ.ಪುರಂ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದ 1.64 ಲಕ್ಷ ಹಣವನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ಮಿನಿ ಟೆಂಪೋದಲ್ಲಿ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ವಿಚಾರಣೆ ನಡೆಸಿದ್ದಾರೆ. ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಾಗೆಯೇ ತುಮಕೂರು ಜಿಲ್ಲೆಯಲ್ಲಿ ದಾಖಲೆ ಇಲ್ಲದ ಲಕ್ಷಾಂತರ ಹಣ ಜಪ್ತಿ ಮಾಡಲಾಗಿದೆ. ತಿಪಟೂರು ನಗರದಲ್ಲಿ ಸಿಬ್ಬಂದಿ ಇಲ್ಲದೆ ಎಟಿಎಂ ವಾಹನದಲ್ಲಿ ಅಕ್ರಮವಾಗಿ ಹಣ ಸಾಗಿಸಲಾಗುತ್ತಿದ್ದು ದಾಖಲೆ ಇಲ್ಲದ 19 ಲಕ್ಷ ಹಣ ಮತ್ತು ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಕೊರಟಗೆರೆ ತಾಲೂಕಿನ ಕಾಟೇನಹಳ್ಳಿ ಚೆಕ್ಪೋಸ್ಟ್ ಬಳಿ ಕಾರಿನಲ್ಲಿದ್ದ ₹1.50 ಲಕ್ಷ ಜಪ್ತಿ ಮಾಡಲಾಗಿದೆ.
Key words: 1.5 crore – money- Koganolli -check post