ಬೆಂಗಳೂರು,ಜನವರಿ,5,2023(www.justkannada.in): ವಿಧಾನಸೌಧದಲ್ಲಿ ಅನಧೀಕೃತವಾಗಿ 10.5 ಲಕ್ಷ ರೂ. ಹಣ ಪತ್ತೆಯಾಗಿದ್ದು, ಹಣ ಹೊಂದಿದ್ದ ಸಹಾಯಕ ಇಂಜಿನಿಯರ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಧಾನಸೌಧಕ್ಕೆ 10.5 ಲಕ್ಷ ರೂ. ನಗದು ಸಾಗಿಸುತ್ತಿದ್ದಾಗ ಮಂಡ್ಯ ಮೂಲದ ಸಹಾಯಕ ಇಂಜಿನಿಯರ್ ಜಗದೀಶ್ ಸಿಕ್ಕಿಬಿದ್ದಿದ್ದಾರೆ. ಬುಧವಾರ ಸಂಜೆ 7 ಗಂಟೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಜಗದೀಶ್ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದರು.
ಗೇಟ್ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಜಗದೀಶ್ ಬ್ಯಾಗ್ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿದೆ. ಆದರೆ ಹಣದ ಮೂಲದ ಕುರಿತಾಗಿ ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ಈ ವ್ಯಕ್ತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ಕೂಡಾ ದಾಖಲಾಗಿದೆ.
Key words: 10.5 lakhs –money-find-vidhana soudha-Assistant Engineer.