ಮಂಗಳೂರು,ಜನವರಿ,5,2023(www.justkannada.in): ವಿಧಾನಸೌಧದಲ್ಲಿ ಅನಧಿಕೃತವಾಗಿ 10 ಲಕ್ಷ ರೂ. ಹಣ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಕ್ಕೆ ಇದೇ ಸಾಕ್ಷಿಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಿದ್ಧರಾಮಯ್ಯ ಈ ಸರ್ಕಾರದಲ್ಲಿ ಭ್ರಷ್ಟಾಚಾರ ಬಿಟ್ಟರೆ ಬೇರೇನೂ ನಡೆಯುತ್ತಿಲ್ಲ. ಈ ರೀತಿ ಸಾಕಷ್ಟು ಪ್ರಕರಣ ನಡೆದಿದೆ. ರಾಜ್ಯದಲ್ಲಿರುವುದು 40% ಸರ್ಕಾರವೆಂದು ಗುತ್ತಿಗೆದಾರರ ಸಂಘ ಹೇಳಿದೆ ಎಂದು ವಾಗ್ದಾಳಿ ನಡೆಸಿದರು.
ಕೆ.ಎಸ್.ಈಶ್ವರಪ್ಪಗೆ ಲಂಚ ಕೊಡಲಾಗದೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದರು. ಸಂತೋಷ್ ನನ್ನ ಸಾವಿಗೆ ಈಶ್ವರಪ್ಪ ಕಾರಣವೆಂದು ಡೆತ್ನೋಟ್ ಬರೆದಿಟ್ಟಿದ್ದರು. ತುಮಕೂರು ಜಿಲ್ಲೆ ದೇವರಾಯನದುರ್ಗದ ಐಬಿಯಲ್ಲಿ ಗುತ್ತಿಗೆದಾರ ಪ್ರಸಾದ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಲೆಗೆ ಗುಂಡು ಹಾರಿಸಿಕೊಂಡು ಪ್ರದೀಪ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುತ್ತಿಗೆದಾರ ಶಿವಕುಮಾರ್ ಎಂಬುವರು ದಯಾಮರಣ ಕೇಳಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ಬಿಟ್ಟರೆ ಬೇರೇನೂ ನಡೆಯುತ್ತಿಲ್ಲ ಎಂದು ಕಿಡಿಕಾರಿದರು.
Key words: 10 lakh- money -found – Vidhana Soudha-proof – corruption – BJP – Siddaramaiah.