ಮೈಸೂರು,ಅಕ್ಟೋಬರ್,5,2020(www.justkannada.in): ಪ್ರತಿದಿನ 10ಸಾವಿರ ಕೋವಿಡ್ ಟೆಸ್ಟ್ ಮಾಡುವ ಗುರಿ ಹೊಂದಿದ್ದೇವೆ. ಕೊರೋನಾ ನಿರ್ವಹಣೆಗೆ ವಿಶೇಷ ಕಾರ್ಯಪಡೆ ರಚನೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಮೈಸೂರಿನಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ವೆಂಕಟೇಶ್ ಹೇಳಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಡಿಹೆಚ್ಒ ವೆಂಕಟೇಶ್, ಬೆಡ್ ಗಳ ಪಾರದರ್ಶಕ ವ್ಯವಸ್ಥೆಗೆ ಬೆಂಗಳೂರು ಮಾದರಿಯಲ್ಲಿ ಆ್ಯಪ್ ಬಳಕೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲೂ ಶೇ 50ರಷ್ಟು ಬೆಡ್ ಗಳನ್ನು ಕೋವಿಡ್ ಗಾಗಿ ಕಾಯ್ದಿರಿಸಬೇಕು ಎಂದರು.
ಹೊರಗುತ್ತಿಗೆ ನೌಕರರ ಪ್ರತಿಭಟನೆಯಿಂದಾಗಿ ಕೊರೊನಾ ಪ್ರಕರಣಗಳ ಅಪ್ಡೇಟ್ ಹಿನ್ನಡೆಯಾಗಿತ್ತು. ಆದರೆ ಇದೀಗ ಹಳೆ ಪ್ರಕರಣಗಳನ್ನೂ ಅಪ್ಡೇಟ್ ಮಾಡಲಾಗುತ್ತಿದೆ. ಹಾಗಾಗಿ ಪಾಸಿಟಿವ್ ಕೇಸ್ ಗಳ ಸಂಖ್ಯೆ ಸಾವಿರದ ಗಡಿ ದಾಟುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಸ್ಪಷ್ಟನೆ ನೀಡಿದರು.
Key words: 10 thousand -covid test -every day-Mysore District –health officer- Venkatesh.