ಮೈಸೂರು,ಆಗಸ್ಟ್,18,2023(www.justkannada.in): 10 ರಿಂದ 15 ಜನ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ಹಾಲಿ ಮಾಜಿ ಶಾಸಕರ ಸೇರ್ಪಡೆ ಬಗ್ಗೆ ಎಲ್ಲರ ಜತೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ. ಯಾರು, ಅವರ ಹೆಸರು ಈಗ ಹೇಳಲು ಸಾಧ್ಯವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದು ನುಡಿದರು.
ರಾಜ್ಯದಲ್ಲಿ ಬರ ಘೋಷಣೆ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ, ಈ ಬಗ್ಗೆ ಸಭೆ ನಡೆಸಿದ್ದೇವೆ. ಜೂನ್ ಮತ್ತು ಆಗಸ್ಟ್ ನಲ್ಲಿ ಮಳೆ ಕೊರತೆಯಾಗಿದೆ. ಶೇ 60 ರಷ್ಟು ಬರ ಇದ್ದರೆ ಕೇಂದ್ರ ಅನುದಾದ ಬಿಡುಗಡೆ ಮಾಡುತ್ತದೆ. ಇದನ್ನ 30% ಗೆ ಇಳಿಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಆ ಪತ್ರಕ್ಕೆ ಕೇಂದ್ರದಿಂದ ಉತ್ತರ ಬಂದಿಲ್ಲ. ಇದರಿಂದ ವಿಶೇಷ ಅನುದಾನವನ್ನ ಕೇಂದ್ರದಿಂದ ಕೇಳಿಲ್ಲ. 30% ಇಳಿಸುವ ಬಗ್ಗೆ ಉತ್ತರ ಬಂದ ನಂತರ ಸಭೆ ನಡೆಸಿ ತೀರ್ಮಾನ ಮಾಡಲಾಗುತ್ತದೆ. ಕಮಿಟಿ ಮೀಟಿಂಗ್ ನಲ್ಲಿ ಬರ ನೀರಿನ ಪರಿಸ್ಥಿತಿಯ ವರದಿಯನ್ನ ಅಧಿಕಾರಿಗಳ ಬಳಿ ಕೇಳಿದ್ದೇವೆ ಎಂದು ಚಲುವರಾಯಸ್ವಾಮಿ ತಿಳಿಸಿದರು.
ಗುತ್ತಿಗೆದಾರರಿಂದ ಹಣ ವಸೂಲಿ ಆರೋಪ ಕುರಿತು ಕೇಳಿದ ಪ್ರಶ್ನೆಗೆ, ಅಯ್ಯೋ ಬಿಡಪ್ಪ, ಕೆಲಸ ಇಲ್ಲದವರು ಮಾತನಾಡೋದು. ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದು ವರ್ಷ ಪೇಮೆಂಟ್ ಕೊಟ್ಟಿರಲಿಲ್ಲ. ನಾವು ಬಂದು ಕೇವಲ 2.5 ಲಕ್ಷ ಕೋಟಿ ಅನುದಾನವನ್ನ ಒಂದೇ ಸಾರಿ ಎಷ್ಟು ಅಂತಾ ಕೋಡೋಕೆ ಆಗುತ್ತದೆ. ಬಾಯಿ ಚಪಲಕ್ಕೆ ಏನೇನೋ ಮಾತಾನಾಡುತ್ತಾರೆ ಅವರಿಗೆಲ್ಲ ಉತ್ತರ ಕೋಡೋಕೆ ಆಗುತ್ತಾ ಎಂದು ಚಲುವರಾಯಸ್ವಾಮಿ ಹೇಳಿದರು.
Key words: 10 to 15 former – sitting -MLAs – ready – join- Congress-Minister- Chaluvarayaswamy