ಬೆಂಗಳೂರು,ಸೆಪ್ಟಂಬರ್,30,2023(www.justkannada.in): ಕಾಂಗ್ರೆಸ್ ಸರ್ಕಾರ ಆರು ತಿಂಗಳಲ್ಲಿ ಬೀಳುತ್ತೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗಾರೆಡ್ಡಿ, ಕಾಂಗ್ರೆಸ್ ಸರ್ಕಾರ ನೂರಕ್ಕೆ ನೂರರಷ್ಟು ಐದು ವರ್ಷ ಅಧಿಕಾರದಲ್ಲಿರುತ್ತದೆ. 4 ವರ್ಷ 8 ತಿಂಗಳು ಅಧಿಕಾರದಲ್ಲಿರುತ್ತೆ. ಪುನಃ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಕೆಲವು ಹಿರಿಯರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ಮುಂದಿನ ದಿನಗಳಲ್ಲಿ ಅವಕಾಶ ಸಿಗಲಿದೆ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
Key words: 100% -Congress – power – five years – Minister- Ramalingareddy