ಬೆಂಗಳೂರು, ನವೆಂಬರ್ 12, 2023 (www.justkannada.in): ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯಲ್ಲಿ ಹಂತ ಹಂತವಾಗಿ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಈ ವಿಷಯವನ್ನು ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ಪ್ರಕಟಿಸಿದ್ದಾರೆ. ಪ್ರಸ್ತುತ 400 ಪಶು ವೈದ್ಯರ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದ್ದು, ಕೆ.ಪಿ.ಎಸ್.ಸಿ.ಗೆ ನೇಮಕಾತಿ ಹೊಣೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಡಿ ದರ್ಜೆ ನೌಕರರಿಂದ ಹಿಡಿದು ಅಧಿಕಾರಿಗಳವರೆಗೆ 19,000 ಸಿಬ್ಬಂದಿ ಬೇಕಿದೆ. ಪ್ರಸ್ತುತ 9000 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಂತ ಹಂತವಾಗಿ 10 ಸಾವಿರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
250 ಪಶು ಇನ್ಸ್ಪೆಕ್ಟರ್ ಗಳ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಅವರಿಗೆ ಆದೇಶ ಪ್ರತಿ ನೀಡಬೇಕಿದೆ ಎಂದು ಪಶು ಸಂಗೋಪನಾ ಇಲಾಖೆ ಸಚಿವರು ತಿಳಿಸಿದ್ದಾರೆ.