ಮೈಸೂರು,ಮಾರ್ಚ್,1,2024(www.justkannada.in): ಮಾರ್ಚ್ 3ರಂದು ಮೈಸೂರು ವಿಶ್ವವಿದ್ಯಾನಿಲಯದ 104ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ನಡೆಯಲಿದ್ದು ಅಂದು ಈ ಬಾರಿ ಮೂವರು ಹಿರಿಯ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗುವುದು ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಎನ್.ಕೆ ಲೋಕನಾಥ್ ತಿಳಿಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ವಿವಿ ಕುಲಪತಿ ಪ್ರೊ. ಎನ್.ಕೆ ಲೋಕನಾಥ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ಘಟಿಕೋತ್ಸವ ನಡೆಯಲಿದ್ದು, ಪದ್ಮ ವಿಭೂಷಣ ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ, ನಾಡೋಜ ಪ್ರೊಫೆಸರ್ ಡಾ. ಭಾಷ್ಯ ಸ್ವಾಮೀಜಿ, ಹಿರಿಯ ರಾಜಕೀಯ ಮುತ್ಸದ್ದಿ, ಶಿಕ್ಷಣ ತಜ್ಞ ಎಂ. ಆರ್ ಸೀತಾರಾಮ್ ಗೆ ಈ ಬಾರಿಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಈ ಬಾರಿಯ ಘಟಿಕೋತ್ಸವದಲ್ಲಿ 32249 ಅಭ್ಯರ್ಥಿಗಳಿಗೆ ವಿವಿಧ ಪದವಿಗಳು ಪ್ರದಾನ ಮಾಡಲಾಗುವುದು. ಈ ಪೈಕಿ 19,992 ಮಹಿಳೆಯರು, 12,257 ಪುರುಷರಾಗಿದ್ದು, ಒಟ್ಟಾರೆಯಾಗಿ ಮಹಿಳೆಯರು ಮೇಲುಗೈ ಸಾಧಿಸಿದ್ದಾರೆ. ವಿವಿಧ ವಿಷಯಗಳಲ್ಲಿ 100 ಅಭ್ಯರ್ಥಿಗಳಿಗೆ ಪಿ ಹೆಚ್. ಡಿ ಪದವಿ ಪ್ರದಾನ ಮಾಡಲಾಗುವುದು. ಒಟ್ಟು 436 ಪದಕಗಳು ಮತ್ತು 266 ಬಹುಮಾನಗಳು 252 ಅಭ್ಯರ್ಥಿಗಳಿಗೆ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಹಾಗೆಯೇ 6,144 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿಗಳು, 26,009 ಅಭ್ಯರ್ಥಿಗಳಿಗೆ ಸ್ನಾತಕ ಪದವಿಗಳು ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಪ್ರೊ. ಎನ್.ಕೆ ಲೋಕನಾಥ್ ತಿಳಿಸಿದರು.
Key words: 104th– Annual Convocation – Honorary doctorates – Mysore University – VC-Prof. NK Lokanath