ಬೆಂಗಳೂರು,ಏಪ್ರಿಲ್,27,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರ ಜೋರಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದ 14 ದಿನಗಳ ಕಾಲ ಜನತಾ ಕರ್ಫ್ಯೂವನ್ನ ಸರ್ಕಾರ ಘೋಷಣೆ ಮಾಡಿದೆ. ಹೀಗಾಗಿ ಬೆಂಗಳೂರು, ಮೈಸೂರು ಸೇರಿ ಪ್ರಮುಖ ನಗರಗಳಿಂದ ಜನರು ತಮ್ಮ ತಮ್ಮಊರುಗಳತ್ತ ತೆರಳುತ್ತಿದ್ದಾರೆ.
ಹೀಗಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ರಾಜ್ಯದಲ್ಲಿ 12 ಸಾವಿರ ಬಸ್ ಸಂಚಾರವಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಕೊರೋನಾ ನಿಯಮ ಪಾಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.
Key words: 12 thousand- bus- Action – passengers-DCM- Laxman Savadi.