ಮೈಸೂರು,ಫೆಬ್ರವರಿ,11,2021(www.justkannada.in) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದಿಂದ ಐಎಎಸ್ ಮತ್ತು ಕೆಎಎಸ್ ತರಬೇತಿ ಶಿಬಿರಾರ್ಥಿಗಳಿಗೆ ಫೆಬ್ರವರಿ 12ರಂದು ಆನ್ ಲೈನ್ ಮೂಲಕ ಶುಭಹಾರೈಕೆ ಮತ್ತು ಅಧ್ಯಯನ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಿದೆ.
ಅಂದು ಬೆಳಗ್ಗೆ 11ಕ್ಕೆ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಯೋಜಿಸಿದ್ದ 60 ದಿನಗಳ ಆನ್ ಲೈನ್ ತರಬೇತಿ ಶಿಬಿರದ ಶಿಬಿರಾರ್ಥಿಗಳಿಗೆ ಹಿರಿಯ ಐಎಎಸ್ ಅಧಿಕಾರಿ ಡಾ.ಶಾಲಿನಿ ರಜನೀಶ್ ಅವರು ಬೆಂಗಳೂರಿನಿಂದಲೇ ಶುಭಹಾರೈಸಿ ಮುಖ್ಯ ಭಾಷಣ ಮಾಡಲಿದ್ದಾರೆ.
ಕರ್ನಾಟಕ ರಾಜ್ಯ ಹಾಸನ ಮೂಲದ ನಾಗಲ್ಯಾಂಡ್ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಎನ್.ರಾಜಶೇಖರ ಮತ್ತು ಐಎಎಸ್ ಅಧಿಕಾರಿ ಹಾಸನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಭಾರತಿ ಅವರು ಅತಿಥಿಗಳಾಗಿ ಆನ್ ಲೈನ್ ನಲ್ಲಿ ಭಾಗವಹಿಸುವರು.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅಧ್ಯಕ್ಷತೆವಹಿಸಲಿದ್ದು, ಕುಲಸಚಿವ ಪ್ರೊ.ಲಿಂಗರಾಜಗಾಂಧಿ ಉಪಸ್ಥಿತರಿರುವರು ಎಂದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.ಕುಲಪತಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್, ಕೆಎಎಸ್ 60 ದಿನಗಳ ಆನ್ ಲೈನ್ ತರಬೇತಿ ಶಿಬಿರವು ನವೆಂಬರ್ 27ರಂದು ಪ್ರಾರಂಭವಾಗಿದ್ದು, ಈ ಶಿಬಿರದಲ್ಲಿ ನಿಷ್ಣಾತರಾದ ಐಎಎಸ್, ಕೆಎಎಸ್ ಅಧಿಕಾರಿಗಳು, ಪ್ರಾಧ್ಯಾಪಕರುಗಳು ವಿವಿಧ ಕ್ಷೇತ್ರಗಳ ವಿಷಯ ತಜ್ಞರುಗಳು ತರಬೇತಿ ನೀಡಿರುತ್ತಾರೆ. 1300ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಭಾಗವಹಿಸುತ್ತಿದ್ದಾರೆ.
key words : 12th-IAS-KAS-campers-KSOU-Good luck-Study-Book Release