ಮೈಸೂರು,ಜೂನ್,20,2021(www.justkannada.in): ಮೈಸೂರು ಜಿಲ್ಲೆಯಲ್ಲಿ ಕೊರೋನಾ ಕಡಿಮೆಯಾಗದ ಹಿನ್ನೆಲೆ ಲಾಕ್ ಡೌನ್ ಮುಂದುವರಿಕೆಯಾಗಿದ್ದು ಈ ನಡುವೆ ಮೈಸೂರಿನಲ್ಲಿ ಜೂನ್ 21 ರಿಂದ ಜುಲೈ 5 ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಮೈಸೂರು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಆದೇಶ ಹೊರಡಿಸಿರುವ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯಕರ ಹಿತದೃಷ್ಠಿಯಿಂದ ಕೋವಿಡ್-19 ಹರಡುವುದನ್ನು ತಡೆಗಟ್ಟಲು ಸರ್ಕಾರದ ಆದೇಶದನ್ವಯ ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಯಾವುದೇ ವಿನಾಯಿತಿ ನೀಡದೆ ಈಗಾಗಲೇ ಇರುವ ನಿರ್ಬಂಧಗಳನ್ನು ಅದೇ ರೀತಿ ಮುಂದುವರೆಸಲಯ ಆದೇಶಿಸಿರುವುದರಿಂದ ಮತ್ತು ಈ ಹಿನ್ನೆಲೆಯಲ್ಲಿ ಇನ್ನು ಹೆಚ್ಚಿನ ಕಠಿಣ ಕ್ರಮಗಳ ಅವಶ್ಯವಿದೆ.
ಸಿಆರ್‌ಪಿಸಿ ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ದಿನಾಂಕ: 21-6-2021ರ ಬೆಳಿಗ್ಗೆ 6.00 ಗಂಟೆಯಿಂದ ದಿನಾಂಕ: 5-7-2021 ರ ಬೆಳಿಗ್ಗೆ 5.00ಗಂಟೆವರೆಗೆ ಮೈಸೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಅವಧಿಯಲ್ಲಿ ಸಾರ್ವಜನಿಕರು ಯಾವುದೇ ಕಾರಣಕ್ಕೂ 5 ಜನರಿಗಿಂತ ಹೆಚ್ಚಾಗಿ ಒಟ್ಟಿಗೆ ಸೇರುವಂತಿಲ್ಲ. ಸಾರ್ವಜನಿಕ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಪ್ರದೇಶಗಳಲ್ಲಿ ಕನಿಷ್ಠ 6 ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಉಲ್ಲೇಖಿತ ಸರ್ಕಾರದ ಆದೇಶಗಳಲ್ಲಿ ಹೊರಡಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು.
ಸಾರ್ವಜನಿಕರು ನಿಯಮಗಳನ್ನು ಉಲ್ಲಂಘಿಸಿ ಜನರನ್ನು ಒಟ್ಟುಗೂಡಿಸಿ ಯಾವುದೇ ರೀತಿಯ ಧರಣಿ, ಪ್ರತಿಭಟನೆ ಹಾಗೂ ಕಾರ್ಯಕ್ರಮಗಳನ್ನು ಮಾಡಲು ಅವಕಾಶವಿರುವುದಿಲ್ಲ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂಥವರ ವಿರುದ್ಧ ಸಂಬಂಧಪಟ್ಟ ಠಾಣಾಧಿಕಾರಿಗಳು ತಪ್ಪದೇ ಕ್ರಮತೆಗೆದುಕೊಳ್ಳಲು ಆದೇಶಿಸಲಾಗಿದೆ.
ಈ ಆದೇಶವನ್ನು ಹಾಗೂ ಸರ್ಕಾರದ ಉಲ್ಲೇಖಿತ ಆದೇಶದ ನಿರ್ಬಂಧಗಳನ್ನು ಯಾವುದೇ ವ್ಯಕ್ತಿಗಳು ಉಲ್ಲಂಘಿಸಿದಲ್ಲಿ ಅಂತಹವರುಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ಕ, 2005 ರ ಸೆಕ್ಷನ್ 5 ರಿಂದ 60 ರನ್ವಯ ಹಾಗೂ ಸೆಕ್ಷನ್ 188 ಐಪಿಸಿ ಹಾಗೂ ಇತರೆ ಕಾನೂನು ನಿಯಮಗಳನ್ವಯ ಕ್ರಮ ಜರುಗಿಸಲಾಗುವುದು.
ಈ ಆದೇಶವು ಕೋವಿಡ್-19 ತಡೆಗಟ್ಟುವ ಕರ್ತವ್ಯ ಕಾರ್ಯಗಳಲ್ಲಿ ಭಾಗಿಯಾಗಿರುವವರಿಗೆ ಮತ್ತು ಕೋವಿಡ್ ಲಸಿಕೆ ಸಂಬಂಧ ಸೇರುವ ಜನರಿಗೆ ಅನ್ವಯಿಸುವುದಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.
Key words: 144 section- Mysore – June 21st– July 7th– Mysore- Police Commissioner