ಮೈಸೂರು,ನವೆಂಬರ್,10,2022(www.justkannada.in): ಇಂದು ಮೈಸೂರಿನಲ್ಲಿ ಪೊಲೀಸ್ ತರಬೇತಿ ಶಾಲೆ ಮತ್ತು ನೂತನ ಆಡಳಿತ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ನೂತನ ಕಟ್ಟಡವನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಆನ್ ಲೈನ್ ಆಫ್ ಐ ಆರ್ ಜಾರಿಗೆ ತರಲಾಗಿದ್ದು ಇ ಬೀಟ್ ಸಿಸ್ಟಮ್ ಮೂಲಕ ಮೊಬೈಲ್ ನಂಬರ್ ಗೆ ಎಸ್ ಎಂ ಎಸ್ ಕಳುಹಿಸಿದರೆ ಪೊಲೀಸ್ ಇಲಾಖೆ ನಿಮಗೆ ಸಹಾಯ ಮಾಡಲಿದೆ.
ಹರಿಯಾಣದಲ್ಲಿ ಎರಡನೇ ಉನ್ನತ ಮಟ್ಟದ ಅಧಿಕಾರಿಗಳ ಸಮಾವೇಶದಲ್ಲಿ ನಮ್ಮ ದೇಶದ ಗೃಹಸಚಿವರು ರಾಜ್ಯದ ಪೊಲೀಸ್ ಇಲಾಖೆಗೆ ಅಭಿನಂದನೆ ಮಾತುಗಳನ್ನ ನುಡಿದರು. ಉತ್ತಮ ತರಬೇತಿಗೆ ಕರ್ನಾಟಕದಲ್ಲಿ ನಡೆಸಬೇಕು ಎಂದರು.
ಇಂದು ಹಲವು ಕಟ್ಟಡಗಳು ಹಾಗೂ 16 ಕೋಟಿ ರೂಪಾಯಿ ವೆಚ್ಚದಲ್ಲಿ ಪೊಲೀಸ್ ತರಬೇತಿ ಶಾಲೆ ಉದ್ಘಾಟನೆ ಮಾಡಲಾಗಿದೆ. ಒಂದೇ ವರ್ಷದಲ್ಲಿ 200 ಕೋಟಿ ವೆಚ್ಚದಲ್ಲಿ ಸುಮಾರು 117 ಹೊಸ ಕಟ್ಟಡ ನಿರ್ಮಾಣ ಮಾಡಲಾಗಿದೆ . ಪೊಲೀಸ್ ಇಲಾಖೆಗೆ ಎಲ್ಲ ರೀತಿಯ ತರಬೇತಿ ನೀಡಲಾಗುತ್ತಿದೆ. ನಮಗೆ ಸವಾಲಿನ ಕೆಲಸ ಅಂದರೆ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚಾಗುತ್ತಿದೆ. ಹಾಗಾಗಿ ಸೈಬರ್ ಕ್ರೈಮ್ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ವಿಶೇಷ ತರಬೇತಿ ಪಡೆದುಕೊಳ್ಳಬೇಕು. ಕಾನ್ಸ್ ಟೇಬಲ್ ಗಳಿಗೆ ಎಲ್ಲವೂ ಸಾಧ್ಯ ದೊಡ್ಡ ದೊಡ್ಡ ಪ್ರಕರಣ ದಲ್ಲಿ ಕಾನ್ಸ್ ಟೇಬಲ್ ಪಾತ್ರ ಪ್ರಮುಖವಾಗಿರುತ್ತದೆ ಎಂದು ತಿಳಿಸಿದರು.
ಹಿಂದೆ ಪೊಲೀಸ್ ಇಲಾಖೆಗೆ ಮಹಿಳೆಯರು ಸೇರುತ್ತಿರಲಿಲ್ಲ. ಆದರೆ ಈಗ ಎಲ್ಲ ವಿಭಾಗದಲ್ಲಿ ಮಹಿಳಾ ಪೊಲೀಸ್ ಇದ್ದಾರೆ. ಇದು ಸಂತಸ ತಂದಿದೆ. ಕಷ್ಟ ಪಟ್ಟು ಪರಿಶ್ರಮದಿಂದ ಕೆಲಸ ಮಾಡಿ ಪೊಲೀಸ್ ಇಲಾಖೆ ಗೆ ಒಳ್ಳೆಯ ಹೆಸರು ಕೊಡಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ, ಪೊಲೀಸ್ ವರಿಷ್ಠಾಧಿಕಾರಿ ಆರ್ ಚೇತನ್ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.
Key words: 16 crore -police –training- school -inaugurated – Mysore-Home Minister -Araga jnanendra.