ಉಡುಪಿ, ಅಕ್ಟೋಬರ್ 29,2020(www.justkannada.in): ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮಲ್ಪೆ ಬಂದರಿನಲ್ಲಿ ಮೀನು ಆಯುವ 17 ಬಾಲ ಕಾರ್ಮಿಕರನ್ನ ರಕ್ಷಣೆ ಮಾಡಿದ್ದಾರೆ.
17 ಬಾಲ ಕಾರ್ಮಿಕರು ಕೊಪ್ಪಳ ಬಳ್ಳಾರಿ ಮೂಲದವರಾಗಿದ್ದು, ಇವರನ್ನು ಮಲ್ಪೆ ಬಂದರಿನಲ್ಲಿ ಮೀನು ಆಯುವ ಕೆಲಸಕ್ಕೆ ಸೇರಿಸಲಾಗಿತ್ತು. ಈ ನಡುವೆ ಇಂದು ಬೆಳ್ಳಂಬೆಳಿಗ್ಗೆ ಮಕ್ಕಳ ರಕ್ಷಣಾ ಘಟಕ ಹಾಗೂ ಇತರೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 17 ಮಂದಿ ಬಾಲಕಾರ್ಮಿಕರನ್ನು ರಕ್ಷಿಸಿದ್ದಾರೆ.
ಮಕ್ಕಳ ರಕ್ಷಣಾ ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ರಕ್ಷಾಣಾಧಿಕಾರಿ ಮಹೇಶ್ ದೇವಾಡಿಗ ಸೇರಿ ಇತರೇ ಅಧಿಕಾರಿಗಳು ಭಾಗಿಯಾಗಿದ್ದರು.
Key words: 17 child- labor- protection – Malpe harbor.