ಬೆಂಗಳೂರು, ಏಪ್ರಿಲ್,24,2025 (www.justkannada.in): ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ.
ಕಾಶ್ಮೀರಕ್ಕೆ ತೆರಳಿರುವ ಕನ್ನಡಿಗರನ್ನು ಅತ್ಯಂತ ಸುರಕ್ಷಿತವಾಗಿ ತಾಯ್ನಾಡು ಕರ್ನಾಟಕಕ್ಕೆ ಕರೆತರುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಕಲ ವ್ಯವಸ್ಥೆಗಳನ್ನು ಕೈಗೊಂಡಿರುವ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು 178 ಕನ್ನಡಿಗರನ್ನು ಶ್ರೀನಗರದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ(ಇಂಡಿಗೋ-6E 9198) ಮೂಲಕ ಇಂದು ಕರೆತರುತ್ತಿದ್ದಾರೆ.
ಇಂದು ಬೆಳಗ್ಗೆ 8:45ಕ್ಕೆ ಶ್ರೀನಗರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಹೊರಟಿದ್ದು,ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 12ಕ್ಕೆ ಬಂದಿಳಿಯಲಿದೆ. ರಾಜ್ಯ ಸರ್ಕಾರದ ವೆಚ್ಚದಲ್ಲೇ ಎಲ್ಲಾ ಪ್ರವಾಸಿಗರ ವಾಪಸ್ ಕರೆತರುವ ಪ್ರಕ್ರಿಯೆ ನಡೆಯುತ್ತಿದೆ.
Key words: Srinagar, 178 Kannadigas, returned, home, safely, today