ಬೆಂಗಳೂರು,ಮಾರ್ಚ್,8,2021(www.justkannada.in): ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕರೋನಾ ವಾರಿಯರ್ಸ್ ಹಾಗೂ ಕೆಎಸ್ ಟಿಡಿಸಿ ಮಹಿಳಾ ಸಿಬ್ಬಂದಿ ಒಟ್ಟು 80 ಮಂದಿ ಎರಡು ದಿನಗಳ ಪ್ರವಾಸಕ್ಕಾಗಿ ಬೆಂಗಳೂರಿನ ಕುಮಾರಕೃಪಾ ದಿಂದ ತೆರಳಿದರು.
ಪ್ರವಾಸೋದ್ಯಮ ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ. ಪಿ ಯೋಗೇಶ್ವರ್, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶೃತಿ ಕೃಷ್ಣ , ವಿಧಾನಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಎರಡು ಬಸ್ ಗಳಿಗೆ ಹಸಿರು ನಿಶಾನೆ ತೋರಿದರು.
ಮೊದಲಿಗೆ ಬೇಲೂರು ಹಳೇಬೀಡು ವೀಕ್ಷಿಸಲಿದ್ದಾರೆ. ನಂತರ ಇಂದು ರಾತ್ರಿ ಯಗಚಿ ಜಲಾಶಯದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನಾಳೆ ಬೆಳಗ್ಗೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಮಣ್ಯ ದರ್ಶನ ಮಾಡಿಕೊಂಡು ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಯೋಗೇಶ್ವರ್ ಅವರು, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಇಲಾಖೆಯಿಂದ ಕೊರೋನಾ ವಾರಿಯರ್ಸ್ ಹಾಗೂ ಪ್ರವಾಸೋದ್ಯಮ ಇಲಾಖೆ ಮಹಿಳಾ ಸಿಬ್ಬಂದಿಗೆ ಪ್ರೋತ್ಸಾಹ ನೀಡಲು 2 ದಿನಗಳ ಪ್ರವಾಸ ಏರ್ಪಡಿಸಲಾಗಿದೆ. ಒಂದು ತಿಂಗಳ ಕಾಲ ಪ್ರವಾಸೋದ್ಯಮ ಇಲಾಖೆಯ ಹೋಟೆಲ್ ಗಳಲ್ಲಿ ಮಹಿಳೆಯರಿಗೆ ವಿಶೇಷ ರಿಯಾಯಿತಿಯನ್ನು ಸಹ ನೀಡಲಾಗುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶೃತಿ ಕೃಷ್ಣ ಕೊರೋನಾ ಸಂದರ್ಭದಲ್ಲಿ ಮುಂಚೂಣಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶುಶ್ರೂಕಿಯರು ತಮ್ಮ ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡಿದ್ದಾರೆ ಅವರುಗಳನ್ನು ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯ ಹೀಗಾಗಿ ಮುಂಚೂಣಿಯಲ್ಲಿದ್ದ ಕೋರೋನಾ ವಾರಿಯರ್ಸ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಮಹಿಳಾ ಸಿಬ್ಬಂದಿಗೆ ಎರಡು ದಿನಗಳ ಪ್ರವಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ತಮ್ಮ ಇಲಾಖೆಯಿಂದ ಮತ್ತಷ್ಟು ಉತ್ತೇಜನ ನೀಡುವುದಾಗಿ ತಿಳಿಸಿದರು.
Key words: 2 day -trip -Corona Warriors – Tourism Department –staff- Minister -C. P yogeshwar