ನವದೆಹಲಿ,ಜುಲೈ,15,2023(www.justkannada.in): ಮಾನನಷ್ಟ ಪ್ರಕರಣದಲ್ಲಿ ಎರಡು ವರ್ಷ ಜೈಲುಶಿಕ್ಷೆ ವಿಧಿಸಿದ್ದ ವಿಚಾರ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷದ ಶಿಕ್ಷೆಗೆ ತಡೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ಧ ಅರ್ಜಿಯನ್ನ ಗುಜರಾತ್ ಹೈಕೋರ್ಟ್ ಜುಲೈ 7 ರಂದು ವಜಾಗೊಳಿಸಿತ್ತು. ಗುಜರಾತ್ ನ್ಯಾಯಾಲಯದ ಆದೇಶವನ್ನ ಪ್ರಶ್ನಿಸಿ ಇದೀಗ ರಾಹುಲ್ ಗಾಂಧಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
2019 ರ ಲೋಕಸಭಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಭಾಷಣದಲ್ಲಿ ಲಲಿತ್ ಮೋದಿ ಮತ್ತು ನೀರವ್ ಮೋದಿಯಂತಹ ವ್ಯಕ್ತಿಗಳನ್ನು ಉಲ್ಲೇಖಿಸಿ ಎಲ್ಲ ಕಳ್ಳರ ಸರ್ ನೇಮ್ ಮೋದಿ ಎಂದೇ ಯಾಕಿದೆ ಎಂದು ಕೇಳಿದ್ದರು. ಈ ಕುರಿತು ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.
Key words: 2 years- imprisonment – defamation case- Rahul Gandhi -Supreme Court.