ನವದೆಹಲಿ.ಫೆಬ್ರವರಿ,24,2022(www.justkannada.in): ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧದ ಪರಿಸ್ಥಿತಿ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಉಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ರಕ್ಷಣೆ ನಮ್ಮ ಪ್ರಮುಖ ಕಾಳಜಿಯಾಗಿದೆ ಎಂದು ಭಾರತದ ಖಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಹೇಳಿದ್ದಾರೆ.
ಯುಎನ್ಎಸ್ಸಿ ಸಭೆಯಲ್ಲಿ ಮಾತನಾಡಿರುವ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ, ಉಕ್ರೇನ್ ನಲ್ಲಿರುವ ಇಪ್ಪತ್ತು ಸಾವಿರಕ್ಕೂ ಹೆಚ್ಚು ಭಾರತೀಯರು ಸಿಲುಕಿದ್ದಾರೆ. ಅವರನ್ನ ಭಾರತಕ್ಕೆ ವಾಪಸ್ ಕರೆತರಲು ಅನುಕೂಲ ಮಾಡಲಾಗುತ್ತದೆ. ಅದರಲ್ಲೂ ಪ್ರಮುಖವಾಗಿ ವಿದ್ಯಾರ್ಥಿಗಳ ರಕ್ಷಣೆ ನಮ್ಮ ಪ್ರಮುಖ ಕಾಳಜಿಯಾಗಿದೆ. ಈ ವಿದ್ಯಾರ್ಥಿಗಳಲ್ಲಿ ಹೆಚ್ಚಿನವರು ಉಕ್ರೇನಿನ ವೈದ್ಯಕೀಯ ಕಾಲೇಜುಗಳಲ್ಲಿ ದಾಖಲಾಗಿದ್ದಾರೆ.
ಭಾರತೀಯ ವಿದ್ಯಾರ್ಥಿಗಳು ಮತ್ತು ಪ್ರಜೆಗಳು ರಷ್ಯಾ ಗಡಿ ಪ್ರದೇಶಗಳನ್ನು ಒಳಗೊಂಡಂತೆ ಉಕ್ರೇನಿನ ವಿವಿಧ ಭಾಗಗಳಲ್ಲಿ ವಾಸಿಸುತ್ತಿದ್ದಾರೆ. ನಮ್ಮವರ ಯೋಗಕ್ಷೇಮ ನಮಗೆ ಆದ್ಯತೆಯಾಗಿದೆ ಎಂದು ತಿರುಮೂರ್ತಿ ತಿಳಿಸಿದ್ದಾರೆ ಎನ್ನಲಾಗಿದೆ.
Key words: 20 thousand -Indians – Ukraine.