ಬೆಂಗಳೂರು, ಅಕ್ಟೋಬರ್ 07,2020(www.justkannada.in): ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳಿಗೆ ಅರ್ಹರನ್ನು ಆಯ್ಕೆ ಮಾಡಲಾಗಿದ್ದು, ಇಂದಿನ ಸಭೆಯಲ್ಲಿ ಪ್ರಕಟಿಸಲಾಗಿದೆ.
ಹಿರಿಯ ಸಾಹಿತಿ, ಚಿಂತಕ ಡಾ. ಬಸವರಾಜ ಕಲ್ಗುಡಿ ಅವರನ್ನು ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ.
ಕನ್ನಡ ಪುಸ್ತಕ ಪ್ರಾಧಿಕಾರದಿಂದ ನೀಡಲಾಗುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ಐಬಿಹೆಚ್ ಪ್ರಕಾಶನಕ್ಕೆ ನೀಡಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರತೀ ವರ್ಷವೂ ನೀಡಲಾಗುವು ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಈ ವರ್ಷ ಇಬ್ಬರನ್ನು ಆಯ್ಕೆ ಮಾಡಲಾಗಿದೆ. ಸಿಂಧಗಿಯ ಶ್ರೀ ಎಂ.ಎನ್. ಪಡಶೆಟ್ಟಿ ಹಾಗೂ ಬೆಂಗಳೂರಿನ ಕೆ. ರಾಜಕುಮಾರ್ ಅವರು ಈ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.
ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ|| ಬಿ.ಎಂ. ಹೆಗ್ಗಡೆ ಅವರಿಗೆ ನೀಡಲಾಗಿದೆ ಎಂದು ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ. ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ರೂ.1.00ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ ರೂ.75,000-00 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ ರೂ.50,000-00 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ|| ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ ರೂ.25,000-00 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ವಾರ್ಷಿಕ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸು ಬಹುಮಾನಗಳಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.
Key words: 2019 Annual Award – Kannada Book Authority-Dr. Dr. Basavaraja Kalgudi – M.M. Kalaburgi Award