ಮಂಡ್ಯ,ಸೆಪ್ಟಂಬರ್,16,2022(www.justkannada.in): ಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. 19 ವಿದ್ಯಾರ್ಥಿನಿಯರು, 10 ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಿಂದ ಮಕ್ಕಳು ಅಸ್ವಸ್ಥಗೊಂಡಿದ್ದರು.
ಅಸ್ವಸ್ಥ 29 ವಿದ್ಯಾರ್ಥಿಗಳನ್ನ ಮಿಮ್ಸ್ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Key words: 29 students -sick – eating –bisiyuta-mandya