ಬೆಂಗಳೂರು,ಫೆಬ್ರವರಿ,21,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿನಗಳು ನಡೆಸುತ್ತಿದ್ದ ಪಾದಯಾತ್ರೆಗೆ ಪೊಲೀಸರು ತಡೆ ನೀಡಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಸಿದ ಬಳಿಕ ಅಲ್ಲಿಂದ ವಿಧಾನಸೌಧದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಪಾದಯಾತ್ರೆ ನಿಲ್ಲಿಸುವಂತೆ ಪೊಲೀಸ್ ಕಮಿಷನರ್ ಕಮಲ್ ಪಂತ್ ಮನವಿ ಮಾಡಿ ಮನವೊಲಿಕೆಗೆ ಯತ್ನಿಸಿದರು. ಆದರೆ ಅದು ವಿಫಲವಾಯಿತು.
ಈ ನಡುವೆ ಪಾದಯಾತ್ರೆ ಕಾವೇರಿ ಜಂಕ್ಷನ್ ಬಳಿ ಬರುತ್ತಿದ್ದಂತೆ ಪೊಲೀಸರು ರಸ್ತೆಗೆ ಬ್ಯಾರಿಕೇಡ್ ಹಾಕಿ ಪಾದಯಾತ್ರೆ ತಡೆದರು. ಬ್ಯಾರಿಕೇಡ್ ನೂಕಿ ಹೋರಾಟಗಾರರು ಮುನ್ನುಗ್ಗುತ್ತಿದ್ದಾರೆ ಎನ್ನಲಾಗಿದೆ.
Key words: 2A reservation- fight – Panchamsali community-Police –bangalore-padayatre