ವಿಶಾಖಪಟ್ಟಣಂ,ಫೆಬ್ರವರಿ,5,2024(www.justkannada.in): ಇಂಗ್ಲೇಂಡ್ ವಿರುದ್ದದ ಐದು ಟೆಸ್ಟ್ ಸರಣಿಗಳ ಪೈಕಿ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ.
ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ನೇತೃತ್ವದ ಟೀಮ್ ಇಂಡಿಯಾ ಗೆಲುವಿನ ನಗೆ ಬೀರಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 396 ರನ್ ಕಲೆ ಹಾಕಿತು. ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ 290 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 19 ಫೋರ್ಗಳೊಂದಿಗೆ 209 ರನ್ ಬಾರಿಸಿದ್ದರು.
ನಂತರ ಪ್ರಥಮ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ ಕೇವಲ 253 ರನ್ಗಳಿಗೆ ಆಲ್ ಔಟ್ ಆಯಿತು. ಭಾರತದ ಪರ ಬುಮ್ರಾ 45 ರನ್ ನೀಡಿ 6 ವಿಕೆಟ್ ಕಿತ್ತಿ ಸಂಭ್ರಮಿಸಿದರು.
ಮೊದಲ ಇನಿಂಗ್ಸ್ನಲ್ಲಿನ 143 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಶುಭ್ಮನ್ ಗಿಲ್ (104) ಶತಕ ಬಾರಿಸಿ ಭಾರತ ಸ್ಕೋರ್ ಹೆಚ್ಚಲು ನೆರವಾದರು. ಆದರೆ ಉಳಿದ ಬ್ಯಾಟ್ಸ್ ಮನ್ ಗಳಿಂದ ನಿರೀಕ್ಷಿತ ಪ್ರದರ್ಶನ ಬರಲಿಲ್ಲ. ಪರಿಣಾಮ ಭಾರತ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 255 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಇಂಗ್ಲೇಂಡ್ ಗೆ 399 ರನ್ ಟಾರ್ಗೆ ನೀಡಿತು.
ಗುರಿ ಬೆನ್ನತ್ತಿದ ಇಂಗ್ಲೇಂಡ್ 292 ರನ್ಗಳಿಗೆ ಆಲೌಟ್ ಆಗಿದ್ದು ಈ ಮೂಲಕ ಭಾರತ 106 ರನ್ ಗಳ ಜಯಸಾಧಿಸಿತು. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದೆ. ಇದಕ್ಕೂ ಮುನ್ನ ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿತ್ತು.
Key words: 2nd Test- Huge win – India -against -England.