ನವದೆಹಲಿ,ಜೂನ್,10,2024 (www.justkannada.in) : ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆದಿದೆ.
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೇರಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಮೊದಲ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಿಎಂ ಅವಾಸ್ ಯೋಜನೆಯಡಿ 5 ವರ್ಷಗಳಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನ ನಿರ್ಮಾಣ ಮಾಡುವುದಕ್ಕೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ ನೂತನ ಕೇಂದ್ರ ಸಚಿವರು ಭಾಗಿಯಾಗಿದ್ದು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ನಿನ್ನೆ ಪ್ರಧಾನಿ ಮೋದಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆದಿದ್ದು ಖಾತೆ ಹಂಚಿಕೆ ಬಗ್ಗೆ ನಿರ್ಧಾರವಾಗಬೇಕಿದೆ.
Key words: 3 crore, houses, poor, cabinet, meeting