ಬೆಂಗಳೂರು,ಜುಲೈ,14,2023(www.justkannada.in): ಐಫೋನ್ ತಯಾರಿಸುವ ಬಹುರಾಷ್ಟ್ರೀಯ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಶೀಘ್ರವೇ ಕಂಪನಿಗೆ ಜಾಗ ಬಿಟ್ಟುಕೊಡಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಶುಕ್ರವಾರ ವಿಧಾನಸಭೆಗೆ ತಿಳಿಸಿದರು.
ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಅವರು ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು.
ಕಂಪನಿಗೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ಹೋಬಳಿಗೆ ಸೇರಿದ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐ ಟಿ ಐ ಆರ್) ದಲ್ಲಿ 300 ಎಕರೆ ಜಾಗ ಕೊಡಲಾಗುತ್ತದೆ. ಕಂಪನಿ ಸುಮಾರು 8,500 ಕೋಟಿ ರೂ. ಹೂಡಿ, ತಯಾರಿಕಾ ಘಟಕ ಸ್ಥಾಪಿಸಲಿದೆ. ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಂಪನಿಯು ನಿರ್ಮಾಣ ಕಾಮಗಾರಿ ಶುರು ಮಾಡಬಹುದು. ನಿರೀಕ್ಷೆ ಪ್ರಕಾರ ಮುಂದಿನ ವರ್ಷ ಉತ್ಪಾದನೆ ಕೂಡ ಆರಂಭಿಸಲಿದೆ. 50 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಈ ಯೋಜನೆಯ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿದೆ ಎಂದು ವಿವರಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಇವು ಸುಮಾರು 110 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದು, 1,450ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಹೇಳಿದರು.
ಕೈಗಾರಿಕಾ ನೀತಿ (2020-25), ಕರ್ನಾಟಕ ಏರೋಸ್ಪೇಸ್ & ಡಿಫೆನ್ಸ್ ನೀತಿ (2022-27) ಮತ್ತು ವಿದ್ಯುತ್ ಚಾಲಿತ ವಾಹನ & ಇಂಧನ ಸಂಗ್ರಹಣೆ ನೀತಿ (2017)ಯಡಿ ನಿಗದಿಗೊಳಿಸಿರುವ ಉತ್ತೇಜಕ ಕ್ರಮಗಳು ಈ ವಲಯದಲ್ಲಿ ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾಗಲು ಪೂರಕವಾಗಿವೆ ಎಂದು ಪಾಟೀಲ ಅಭಿಪ್ರಾಯಪಟ್ಟರು.
ENGLISH SUMMARY..
300 acres of land to Foxconn soon
Legal hurdles resolved: MB Patil
Bengaluru: The legal hurdles related to providing 300 acres of land to iPhone maker Foxconn have been resolved and the land will be handed over soon to the company, large and medium industries minister MB Patil said on Friday.
He stated this at the legislative assembly while answering a query by Dheeraj Muniraju, MLA of Doddaballapura.
“A total of 300 acres will be given to the company in the ITIR spread over Devanahalli and Doddaballapura taluks. The company would invest around Rs. 8,500 Crore to set up a manufacturing plant. The company can commence construction work immediately after the handing over of the land” Patil said. The company has planned to start production at the plant by next April. The government is facilitating the commissioning of the project which would provide 50,000 jobs, he added.
In the last three years, 3 major and medium industries have come up in the Doddaballapura taluk. They have invested about Rs. 110 crores and generated nearly 1,450 jobs, Minister told.
Key words: 300 Acres – handed over- Fox Conn- Company –soon-Minister- MB Patil