ಮೌಂಟ್ಮೌಂಗಾನುಯಿ, ಫೆಬ್ರವರಿ 11, 2020 (www.justkannada.in): ಆರಂಭಿಕ ಆಘಾತದ ನಡುವೆಯೂ ಕನ್ನಡಿಗ ಕೆ.ಎಲ್ ರಾಹುಲ್ (112 ರನ್, 113 ಎಸೆತಗಳು) ವೃತ್ತಿ ಜೀವನದ ನಾಲ್ಕನೇ ಶತಕ ಹಾಗೂ ಶ್ರೇಯಸ್ ಅಯ್ಯರ್ (62 ರನ್, 63 ಎಸೆತಗಳು) ಅವರ ಅರ್ಧಶತಕದ ಬಲದಿಂದ ಭಾರತ ತಂಡ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡುವಲ್ಲಿ ಯಶಸ್ವಿಯಾಗಿದೆ.
ಇಲ್ಲಿನ ಬೇ ಓವಲ್ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ, ನಿಗದಿತ 50 ಓವರ್ಗಳಿಗೆ ಏಳು ವಿಕೆಟ್ ನಷ್ಟಕ್ಕೆ 296 ರನ್ ಗಳಿಸಿದ್ದು, ಕಿವೀಸ್ಗೆ 297 ರನ್ ಗುರಿ ನೀಡಿದೆ.
ತಂಡದ ಮೊತ್ತ ಕೇವಲ 8 ರನ್ ಗಳಾಗಿದ್ದಾಗಲೇ ಕಿವೀಸ್ ಪಡೆ ಆರಂಭಿಕ ಆಘಾತ ನೀಡಿತು. 1 ರನ್ ಗಳಿಸಿದ್ದ ಮಯಾಂಕ್ ಅಗರ್ವಾಲ್ ಜೇಮೀಸನ್ ಬೌಲಿಂಗ್ ನಲ್ಲಿ ಕ್ಲೀನ್ ಬೋಲ್ಡ್ ಆದರು. ಬಳಿಕ ಬಂದ ನಾಯಕ ವಿರಾಟ್ ಕೊಹ್ಲಿ ಕೂಡ ಕೇವಲ 9 ರನ್ ಗಳಿಸಿ ಬೆನೆಟ್ ಗೆ ವಿಕೆಟ್ ಒಪ್ಪಿಸಿದರು.
ಉತ್ತಮವಾಗಿ ಬ್ಯಾಟಿಂಗ್ ಆರಂಭಿಸಿರುವ ನ್ಯೂಜಿಲ್ಯಾಂಡ್ ಸದ್ಯ 25 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿದೆ.