ಬೆಂಗಳೂರು,ಆಗಸ್ಟ್,16,2024 (www.justkannada.in): ಕೋಟ್ಯಾಂತರ ಕುಟುಂಬಗಳಿಗೆ ಪಂಚ ಗ್ಯಾರಂಟಿ ಯೋಜನೆಗಳು ಜೀವನಾಧಾರವಾಗಿವೆ. ಹೀಗಾಗಿ ಗ್ಯಾರಂಟಿ ಯೋಜನೆಗಳಲ್ಲಿ ನಿಲ್ಲುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಅಧಿಕೃತವಾಗಿ ತಿಳಿಸಿದೆ.
ಈ ಕುರಿತು ಟ್ವಿಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಜೀವನಾಧಾರವಾಗಿವೆ. 4.40 ಕೋಟಿ ಜನರಿಗೆ ಈ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ. ಹೀಗಿದ್ದರೂ ಅನಾವಶ್ಯಕವಾಗಿ ಕೆಲವು ಸಚಿವರು ಮಾತನಾಡುತ್ತಿರುವುದು ಸರಿಯಲ್ಲ. ಅದೇನೇ ಇದ್ದರೂ ಮುಖ್ಯಮಂತ್ರಿಗಳು ಮತ್ತು ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿ ಹೇಳಿಕೆ ನೀಡಬೇಕು ಎಂದು ಎಂದು ಕಾಂಗ್ರೆಸ್ ತಿಳಿಸಿದೆ.
Key words: 4.40 crore, people, benefit, Guarantee scheme, Congress