ಬೆಂಗಳೂರು,ಆಗಸ್ಟ್,9,2022(www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಲೆಳೆದಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಅಮಿತ್ ಶಾ ಬಂದುಹೋದ ಬಳಿಕ ಮೋಡ ಕವಿದ ವಾತಾವರಣ. 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವುದು ಸನ್ನಿಹಿತವಾಗಿದೆ. ಬೊಮ್ಮಾಯಿ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ. ಎಂದು ಟೀಕಿಸಿದೆ.
ಹಾಗೆಯೇ ಮುಂದುವರೆದು, ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ! ಬೊಮ್ಮಾಯಿ ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ ಬಿಜೆಪಿ vs ಬಿಜೆಪಿ ಕಾದಾಟವೇ ಅಥವಾ ಯಡಿಯೂರೊಪ್ಪನವರ ಕೋಪವೇ..? ಎಂದು ಪ್ರಶ್ನೆ ಹಾಕುವ ಮೂಲಕ ಲೇವಡಿ ಮಾಡಿದೆ.
ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬೊಮ್ಮಾಯಿ ಅವರನ್ನ ಕೇಶವ ಕೃಪಾದವರು ‘ಸಂಘಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ ಸಿಎಂ ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ ಎಂದು ಬಿಜೆಪಿಗೆ ಕಾಂಗ್ರೆಸ್ ಟಾಂಗ್ ನೀಡಿದೆ.
Key words: 40% government-‘3rd CM’s- seat -State -Congress