ಬೆಂಗಳೂರು,ಜನವರಿ,5,2022(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು ಇಂದು ಒಂದೇ ದಿನ ಕೋವಿಡ್ ಪ್ರಕರಣಗಳ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ.
ಹೌದು ರಾಜ್ಯದಲ್ಲಿ ಇಂದು ಒಂದೇ ದಿನ ಹೊಸದಾಗಿ 4,246 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಹಾಗೆಯೇ ಬೆಂಗಳೂರಿನಲ್ಲಿ ಒಂದು ಕೋವಿಡ್ ಸೋಂಕಿನ ಪ್ರಕರಣ ಮೂರು ಸಾವಿರ ಗಡಿ ದಾಟಿದೆ. ಬೆಂಗಳೂರಿನಲ್ಲಿ 3605 ಕೊರೋನಾ ಪ್ರಕರಣಗಳು ದೃಢವಾಗಿದೆ.
ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 3.33 ರಷ್ಟಿದೆ. ಹೆಚ್ಚುತ್ತಿರುವ ಕೋವಿಡ್ ಮತ್ತು ಒಮಿಕ್ರಾನ್ ತಡೆಗಾಗಿ ರಾಜ್ಯ ಸರ್ಕಾರ ಈಗಾಗಲೇ ಕಠಿಣ ನಿಯಮಗಳನ್ನ ಜಾರಿಗೊಳಿಸಲು ನಿರ್ಧಾರ ಕೈಗೊಂಡಿದೆ.
Key words: 4,246 Kovid cases – state- today.