ಮಂಡ್ಯ,ಡಿಸೆಂಬರ್,16,2022(www.justkannada.in): ರೈತರು ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದೇನೆ. 46 ಸಾವಿರ ನೇಕಾರರ ಕುಟುಂಬಕ್ಕೆ ನೆರವು ನೀಡಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಡೆದ ಬಿಜೆಪಿ ಜನಸಂಕಲ್ಪಯಾತ್ರೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನೇಕಾರರಿಗೆ ಸರ್ಕಾರದಿಂದ ನೆರವು ನೀಡಲಾಗುತ್ತಿದೆ. ನೇಕಾರ ಸಮ್ಮಾನ್ ಯೋಜನೆಯಡಿ 46,864 ಫಲಾನುಭವಿಗಳಿಗೆ 5000 ರೂ.ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಒಟ್ಟು 23.43 ಕೋಟಿ ರೂ.ಗಳು ನೇರವಾಗಿ ನೇಕಾರರ ಬ್ಯಾಂಕ್ ಖಾತೆಗೆ ವರ್ಗಾವಣೆಗೆ ಚಾಲನೆ ನೀಡಲಾಗಿದೆ ಎಂದರು.
ಯುವ ಸಂಘಕ್ಕೆ 5 ಸಾವಿರ ರೂ. ಪ್ರೋತ್ಸಾಹ ಧನ ವಿತರಿಸಲಾಗುತ್ತಿದೆ. ಸ್ತ್ರಿ ಸಾಮರ್ಥ್ಯ ಯೋಜನೆಯಡಿ ಪ್ರತಿಸಂಘಕ್ಕೆ 5 ಸಾವಿರ ರೂ ನೀಡಲಾಗುತ್ತದೆ. ದುಡಿಯುವ ವರ್ಗಕ್ಕೆ ನಮ್ಮ ಬೆಂಬಲ ಇರುತ್ತೆ. ಕೈಮಗ್ಗ ನೇಕಾರರ ಅಭಿವೃದ್ದಿಗೆ ಪಣ ತೊಟ್ಟಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
Key words: 46 thousand –weavers- 5 thousand r- incentive -money – youth association-CM Basavaraja Bommai