ಕೊಪ್ಪಳ, ಮೇ 30,2021 (www.justkannada.in): ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹಳ್ಳಿ ಹಳ್ಳಿಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಪ್ರತಿಯೊಂದು ಗ್ರಾಮಗಳಲ್ಲೂ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.
ಈ ನಡುವೆ ಕೊಪ್ಪಳ ಜಿಲ್ಲೆಯ ಗ್ರಾಮವೊಂದರಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಂಡವರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ.
ಗಂಗಾವತಿಯ ಕೇಸರಹಟ್ಟಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಸವರಾಜ, ಕೋವಿಡ್ ಟೆಸ್ಟ್ ಗೆ ಒಳಪಡುವವರಿಗೆ 500 ರೂ. ಪ್ರೋತ್ಸಾಹಧನ ಘೋಷಿಸಿದ್ದಾರೆ ಎನ್ನಲಾಗಿದೆ.
ಕೊರೊನಾ ನಿಯಂತ್ರಣಕ್ಕೆ ವಿಭಿನ್ನ ಆಲೋಚನೆ ಮಾಡಿರುವ ಗ್ರಾಮಪಂಚಾಯಿತಿ ಅಧ್ಯಕ್ಷರು, ಜನರಿಗೆ ಒಂದು ದಿನದ ಕೂಲಿ ನೀಡುವ ಭರವಸೆ ನೀಡುತ್ತಿದ್ದಾರೆ.