ನವದೆಹಲಿ,ಅಕ್ಟೋಬರ್,4,2021(www.justkannada.in): ಮಹಾಮಾರಿ ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಅನುಮೋದನೆ ನೀಡಿದೆ.
ಕೊರೊನಾಗೆ ಬಲಿಯಾದ ಕುಟುಂಬಕ್ಕೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಗೈಡ್ಲೈನ್ಸ್ ನಂತೆ ರೂ. 50 ಸಾವಿರ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಅನುಮೋದನೆ ನೀಡಿದೆ. ಅರ್ಜಿ ಸಲ್ಲಿಸಿದ 30 ದಿನದೊಳಗೆ ಪರಿಹಾರವನ್ನು ನೀಡಬೇಕು ಮತ್ತು ಪರಿಹಾರ ನೀಡುವ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರಗಳು ಹೆಚ್ಚಾಗಿ ಪ್ರಚಾರ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಈ ಸಂಬಂಧ ಸುಪ್ರೀಂಕೋರ್ಟ್ ನ್ಯಾ. ಎಂ.ಆರ್.ಶಾ ನೇತೃತ್ವದ ಪೀಠ ಆದೇಶ ಹೊರಡಿಸಿದೆ.
ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಹಣವನ್ನು ಪಾವತಿಸಲಾಗುವುದು ಎಂದು ಕೋರ್ಟ್ ತಿಳಿಸಿದ್ದು, ಪರಿಹಾರದ ಮೊತ್ತವನ್ನು ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ವಿತರಿಸಬೇಕು ಮತ್ತು ಸಾವಿಗೆ ಕಾರಣವನ್ನು ಕೋವಿಡ್ -19 ಎಂದು ಪ್ರಮಾಣೀಕರಿಸಬೇಕು ಎಂದು ತಿಳಿಸಿದೆ.
Key words: 50,000 – compensation- deceased – Corona- family -Supreme Court