ಬೆಂಗಳೂರು,ಆಗಸ್ಟ್,15,2023(www.justkannada.in): ಕೇಂದ್ರ ಸರ್ಕಾರ ಹೆಚ್ಚುವರಿ 5 ಕೆಜಿ ಅಕ್ಕಿ ಪೂರೈಕೆಗೆ ನಿರಾಕರಿಸಿದ ಹಿನ್ನೆಲೆ ಕಳೆದ ತಿಂಗಳು ಅಕ್ಕಿ ಬದಲು ಖಾತೆಗೆ ಹಣವನ್ನ ಹಾಕಿದ್ದ ರಾಜ್ಯ ಸರ್ಕಾರ ಇದೀಗ ಈ ತಿಂಗಳು ಕೂಡ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲಿದೆ.
ಈ ಕುರಿತು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮಾಹಿತಿ ನೀಡಿದ್ದು, ಈ ತಿಂಗಳು ಕೂಡ ಹೆಚ್ಚುವರಿ 5 ಕೆಜಿ ಬದಲು ಹಣ ನೀಡುತ್ತೇವೆ. ಸೆಪ್ಟೆಂಬರ್ ತಿಂಗಳಿನಲ್ಲೂ ಕೂಡ ಹೆಚ್ಚುವರಿ ಅಕ್ಕಿ ಸಿಗುವುದು ಅನುಮಾನ. ಹೀಗಾಗಿ ಅಕ್ಕಿ ಬದಲು ಹಣ ನೀಡುತ್ತೇವೆ. ಆದಷ್ಟು ಬೇಗ ಹೆಚ್ಚುವರಿ ಅಕ್ಕಿ ಖರೀದಿಸಿ ವಿತರಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ವಿತರಿಸಲು ಹೆಚ್ಚುವರಿ 5 ಕೆಜಿ ಅಕ್ಕಿ ಪೂರೈಸುವಂತೆ ಕೇಂದ್ರಕ್ಕೆ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಪೂರೈಕೆಗೆ ನಿರಾಕರಿಸಿತ್ತು.
Key words: 5kg rice – money-Food Minister- KH Muniappa.