ನವದೆಹಲಿ,20,2023(www.justkannada.in): 5, 8ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಮೇಲ್ಮನವಿ ಸಲ್ಲಿಸಿದೆ.
ಅಲ್ಲದೆ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ಗೆ ವಕೀಲರು ಮನವಿ ಮಾಡಿದ್ದು, ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಸಿಜೆಐ ಹೇಳಿದ್ದಾರೆ.
ಮತ್ತೊಂದೆಡೆ ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಅಷ್ಟರೊಳಗೆ ಮೇಲ್ಮನವಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದ್ದಾರೆ. ಆದರೆ ಸಿಜೆಐ ಡಿ.ವೈ.ಚಂದ್ರಚೂಡ್ ವಕೀಲರ ಮನವಿ ತಿರಸ್ಕರಿಸಿದ್ದಾರೆ.
ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮವೆಂದು ಹೈಕೋರ್ಟ್ಗೆ ಗೊತ್ತಿದೆ. ನಾವು 4,000 ಶಾಲೆಗಳನ್ನು ಪ್ರತಿನಿಧಿಸುತ್ತೇವೆ. ನಮ್ಮ ವಾದ ಆಲಿಸಬೇಕೆಂದು ಸಿಜಿಐ ಚಂದ್ರಚೂಡ್ ಅವರಿಗೆ ವಕೀಲರು ಮನವಿ ಮಾಡಿದ್ದಾರೆ. ವಕೀಲರ ವಾದದ ಬಳಿಕ ಮಾರ್ಚ್ 27 ರಂದೇ ವಿಚಾರಣೆ ನಡೆಸುವುದಾಗಿ ಸಿಜೆಐ ತಿಳಿಸಿದ್ದಾರೆ.
5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿತ್ತು. ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿತ್ತು.
Key words: 5th and 8th-class –board- examination- Supreme Court – High Court- order.